ಅನರ್ಹ ಅಂತ್ಯೋದಯ,ಬಿಪಿಎಲ್ ಪಡಿತರ ಚೀಟಿ ದಂಡ ರಹಿತವಾಗಿ ಜೂ.30ರೊಳಗೆ ಹಿಂದಿರುಗಿಸಿ- ಜಿಲ್ಲಾಧಿಕಾರಿ

ಸಾರ್ವಜನಿಕ ವಿತರಣಾ ಪದ್ಧತಿಯಡಿ ಅಂತ್ಯೋದಯ (ಎಎವೈ) ಅನರ್ಹ ಕುಟುಂಬಗಳು ಪಡಿತರ ಚೀಟಿಗಳನ್ನು ದಂಡ ರಹಿತವಾಗಿ ಜೂ.30ರೊಳಗೆ ಹಿಂದಿರುಗಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದೆ.

 

ಅನರ್ಹರು ಹೊಂದಿರುವ ಅಂತ್ಯೋದಯ ಮತ್ತು ಬಿಪಿಎಲ್ ಪಡಿತರ ಚೀಟಿಗಳನ್ನು ಸ್ವಯಂ ಪ್ರೇರಿತರಾಗಿ ಇಲಾಖೆಗೆ ಹಿಂದಿರುಗಿಸಿದರೆ ಅಂತಹವರ ವಿರುದ್ಧ ಯಾವುದೇ ಕಾನೂನು ಕ್ರಮ ಅಥವಾ ದಂಡ ವಸೂಲಿ ಮಾಡಲಾಗುವುದಿಲ್ಲ. ಸರಕಾರ ನಿಗದಿಪಡಿಸಿರುವ ಮಾನದಂಡಗಳಿಗೆ ವಿರುದ್ಧವಾಗಿ ಅಂತ್ಯೋದಯ ಮತ್ತು ಬಿಪಿಎಲ್ ಪಡಿತರ ಚೀಟಿಗಳನ್ನು ಪಡೆದುಕೊಂಡವರು ಆಯಾ ತಾಲೂಕಿನ ತಹಶೀಲ್ದಾರರು/ಸಹಾಯಕ ನಿರ್ದೇಶಕರಿಗೆ ಪಡಿತರ ಚೀಟಿಗಳನ್ನು ಹಿಂದಿರುಗಿಸಿದರೆ ಅವರಿಗೆ ಎಪಿಎಲ್ ಪಡಿತರ ಚೀಟಿಗಳನ್ನಾಗಿ ಪರಿವರ್ತಿಸಲು ಅವಕಾಶ ಕಲ್ಪಿಸಲಾಗಿದೆ.

ಜೂ.30ರೊಳಗೆ ವಾಪಸ್ ಮಾಡದಿದ್ದರೆ ಅಂತಹವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಮತ್ತು ಸ್ವೀಕರಿಸಲಾದ ಆಹಾರ ಧಾನ್ಯಗಳ ಮಾರುಕಟ್ಟೆ ಮೌಲ್ಯವನ್ನು ವಸೂಲು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Leave A Reply

Your email address will not be published.