ಅನರ್ಹ ಬಿಪಿಎಲ್ ಪಡಿತರ ಚೀಟಿಗಳನ್ನು ಹಿಂದಿರುಗಿಸಲು ಇದೇ ಜೂನ್ 30 ಅಂತಿಮ ಗಡು | ಅದರೊಳಗೆ ಸಲ್ಲಿಸುವವರಿಗೆ ದಂಡ ಇರಲ್ಲ !!

ಸಾರ್ವಜನಿಕ ವಿತರಣಾ ಪದ್ಧತಿಯಡಿ ಅಂತ್ಯೋದಯ(ಎಎವೈ) ಅನ್ನ ಮತ್ತು ಆದ್ಯತಾ(ಬಿಪಿಎಲ್) ಪಡಿತರ ಚೀಟಿಗಳನ್ನು ಈಗಾಗಲೇ ಹೊಂದಿರುವ ಅನರ್ಹ ಕುಟುಂಬಗಳು ಪಡಿತರ ಚೀಟಿಗಳನ್ನು ದಂಡ ರಹಿತವಾಗಿ ಹಿಂತಿರುಗಿಸಲು ಜೂ.30 ರ ಗಡಿ ನೀಡಲಾಗಿದೆ.

ಸರಕಾರ ನಿಗದಿಪಡಿಸಿರುವ ಮಾನದಂಡಗಳಿಗೆ ವಿರುದ್ಧವಾಗಿ ಅಂತ್ಯೋದಯ(ಎಎವೈ) ಮತ್ತು ಆದ್ಯತಾ(ಬಿಪಿಎಲ್) ಪಡಿತರ ಚೀಟಿಗಳನ್ನು ಪಡೆದುಕೊಂಡವರು ಆಯಾ ತಾಲೂಕಿನ ತಹಶೀಲ್ದಾರರು ಅಥವಾ ಸಹಾಯಕ ನಿರ್ದೇಶಕರಿಗೆ ಪಡಿತರ ಚೀಟಿಗಳನ್ನು ಜೂನ್ 30ರೊಳಗೆ ಹಿಂದಿರುಗಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಅನರ್ಹರು ಹೊಂದಿರುವ ಎಎವೈ ಮತ್ತು ಬಿಪಿಎಲ್ ಪಡಿತರ ಚೀಟಿಗಳನ್ನು ಸ್ವಯಂ ಪ್ರೇರಿತರಾಗಿ ಇಲಾಖೆಗೆ ಹಿಂದಿರುಗಿಸಬೇಕು. ತಾವೇ ಬಂದು ಹಿಂತಿರುಗಿಸುವವರ ವಿರುದ್ಧ ಯಾವುದೇ ರೀತಿಯ ಕಾನೂನು ಕ್ರಮ ಅಥವಾ ದಂಡ ವಸೂಲಿ ಮಾಡಲಾಗುವುದಿಲ್ಲ. ಹಾಗೆಯೇ, ಅನರ್ಹರು ಹೊಂದಿರುವ ಅಂತ್ಯೋದಯ (ಎಎವೈ) ಅನ್ನ ಮತ್ತು ಆದ್ಯತಾ (ಬಿಪಿಎಲ್) ಪಡಿತರ ಚೀಟಿಗಳನ್ನು ಹಿಂದಿರುಗಿಸಿದವರಿಗೆ ಆದ್ಯತೇತರ (ಎಪಿಎಲ್) ಪಡಿತರ ಚೀಟಿಗಳನ್ನಾಗಿ ಪರಿವರ್ತಿಸಲು ಅವಕಾಶವನ್ನು ಕಲ್ಪಿಸಲಾಗಿದೆ.

ಪಡಿತರ ಚೀಟಿಯನ್ನು ಹಿಂದಿರುಗಿಸದೇ ಇದ್ದರೆ ಅಥವಾ ಅಕ್ರಮ ಪಡಿತರ ಚೀಟಿ ಹೊಂದಿರುವವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ 1955 ಮತ್ತು ಕರ್ನಾಟಕ ಅನಧಿಕೃತ ಪಡಿತರಚೀಟಿ ಹೊಂದುವುದರ ತಡೆ ಆದೇಶ 1977ರ ಹಾಗೂ ಐಪಿಸಿ ಕಾಲಂಗಳಡಿಯಲ್ಲಿ ಕ್ರಮ ಜರುಗಿಸಲಾಗುವುದು ಹಾಗೂ ಹಂಚಿಕೆ ಪಡೆದ ಆಹಾರ ಧಾನ್ಯಗಳ ಮಾರುಕಟ್ಟೆ ಮೌಲ್ಯವನ್ನು ವಸೂಲು ಮಾಡಲಾಗುವುದೆಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave A Reply

Your email address will not be published.