ತನ್ನ ಮೇಲಾದ ಲೈಂಗಿಕ ಕಿರುಕುಳದ ಬಗ್ಗೆ ಬರೆದುಕೊಂಡ ನಟಿ..ನಿರ್ದೇಶಕ, ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸಹಿತ ಹಲವರ ಮೇಲೆ ಆರೋಪ

ಹಲವಾರು ರಂಗಗಳಲ್ಲಿ ಮಹಿಳೆಯರ ಮೇಲೆ ಹಲವಾರು ರೀತಿಯಲ್ಲಿ ಲೈಂಗಿಕ ಕಿರುಕುಳಾಗುತ್ತಿದ್ದು, ಇದರ ವಿರುದ್ಧ ದನಿ ಎತ್ತುವವರು ಕಡಿಮೆ. ಆದರೆ ಇದೀಗ ನಟಿಯೊಬ್ಬರು ಮೂರು ವರ್ಷಗಳ ಹಿಂದೆ ತನಗಾದ ಲೈಂಗಿಕ ಕಿರುಕುಳದ ವಿರುದ್ಧ ಸೋಶಿಯಲ್ ಮೀಡಿಯಾ ದಲ್ಲಿ ಹೇಳಿಕೊಂಡಿದ್ದಾರೆ.

 

‘ಪಟ್ನಾಗರ್’ ಎಂಬ ಚಿತ್ರದ ಮೂಲಕ ಮಾಲಿವುಡ್‌ಗೆ ಕಾಲಿಟ್ಟ ಮಲಯಾಳಂ ನಟಿ ರೇವತಿ ಸಂಪತ್ ಚಿತ್ರರಂಗಕ್ಕೆ ಬಂದು ಮೂರು ವರ್ಷಗಳಾಗಿವೆ ಆದರೆ ಇದೀಗ ಸೋಷಿಯಲ್ ಮೀಡಿಯಾದಲ್ಲಿ ತಮಗೆ ಕಿರುಕುಳ ನೀಡಿದ ಎಲ್ಲಾ ಜನರ ಹೆಸರುಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಬಯಲಿಗೆಳೆದಿದ್ದಾರೆ.

ಮೂರು ವರ್ಷಗಳ ಹಿಂದೆ ಸಿನೆಮಾ ನಿರ್ದೇಶಕನಿಂದ ಹಿಡಿದು ಪೊಲೀಸ್ ಸಬ್‌ಇನ್ಸ್‌ಪೆಕ್ಟರ್‌ವರೆಗೂ ಒಟ್ಟು 14 ಜನರು ತಮಗೆ ಲೈಂಗಿಕವಾಗಿ, ಮಾನಸಿಕವಾಗಿ, ಭಾವನಾತ್ಮಕವಾಗಿ ಕಿರುಕುಳ ನೀಡಿದ್ದಾರೆ ಎಂದು ನಟಿ ರೇವತಿ ಸಂಪತ್ ಇದೀಗ ತಮ್ಮ ಫೇಸ್‌ಬುಕ್‌ ಪೋಸ್ಟ್‌ನಲ್ಲಿ ಆರೋಪಿಸಿದ್ದಾರೆ.

Leave A Reply

Your email address will not be published.