ವಿದ್ಯುತ್ ಆಘಾತಕ್ಕೆ ಒಳಗಾದ ಮಲ್ಪೆಯ ಯುವಕ ಸಾವು

ವಿದ್ಯುತ್ ಪ್ರವಹಿಸಿ ಯುವಕನೋರ್ವ ಮೃತಪಟ್ಟ ಘಟನೆ ಉದ್ಯಾವರ ಕನಕೋಡದಲ್ಲಿ ಬುಧವಾರ ಸಂಜೆ ನಡೆದಿದೆ.

ಮಲ್ಪೆ ಕೊಡವೂರು ನಿವಾಸಿ ಮನೋಜ್ ಕರ್ಕೇರ ಮತ್ತು ಶಶಿಕಲಾ ದಂಪತಿಯ ಪುತ್ರ ಮೋಕ್ಷಿತ್ ಕರ್ಕೇರ (25 ವ) ಮೃತ ದುರ್ದೈವಿ.

ಬುಧವಾರ ಸಂಜೆ ಉದ್ಯಾವರ ಕನಕೋಡದಲ್ಲಿ ಆತನ ಚಿಕಪ್ಪ ಶಂಕರ ಎಂಬವರ ಮನೆಯಲ್ಲಿ ಗಾಳಿ ಮಳೆಯ ಕಾರಣ ವಿದ್ಯುತ್ ಕೈ ಕೊಟ್ಟಿದ್ದು, ಅದನ್ನು ಕಂಡು ಮೈನ್ ಸ್ವಿಚ್ ಬೋರ್ಡ್ ಪರಿಶೀಲನೆ ನಡೆಸುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

ವಿದ್ಯುತ್ ಶಾಕ್ ನಿಂದ ಗಂಭೀರ ಗಾಯಗೊಂಡ ಆತನನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಗಿದ್ದು, ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲೇ ಆತ‌ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

Leave A Reply

Your email address will not be published.