ಕಾಪು | ಗೃಹಣಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು

ಕಾಪು: ಉದ್ಯಾವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಿತ್ರೋಡಿಯಲ್ಲಿ ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ವರದಿಯಾಗಿದೆ.

ಸುಕನ್ಯಾ (52) ನೇಣಿಗೆ ಶರಣಾದ ಗೃಹಿಣಿ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.

ಮನೆಯ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದು, ಸ್ಥಳೀಯರ ಸಹಾಯದಿಂದ ಉಡುಪಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತದರೂ ಅದಾಗಲೇ ಮೃತಪಟ್ಟಿದ್ದರು ಎಂದು ವೈದ್ಯರು ತಿಳಿಸಿದ್ದಾರೆ.

ಕಾಪು ಪೊಲೀಸ್ ಠಾಣಾ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ತನಿಖೆ ಆರಂಭಿಸಿದ್ದಾರೆ.

Leave A Reply

Your email address will not be published.