ಮಂಗಳೂರು | ಮಹಿಳೆಯೊಬ್ಬರ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವುಗೈದಿದ್ದ ಆರೋಪಿಯ ಬಂಧನ

ಮಂಗಳೂರು: ನಗರದ ಮಹಿಳೆಯೋರ್ವರ ಚಿನ್ನಾಭರಣವಿದ್ದ ಬ್ಯಾಗ್ ಕಳವುಗೈದ ಆರೋಪಿಯನ್ನು ಬಂಧಿಸಿರುವ ಕದ್ರಿ ಠಾಣೆ ಪೊಲೀಸರು 2.50 ಲಕ್ಷ ರೂ. ಮೌಲ್ಯದ 53 ಗ್ರಾಂ ತೂಕದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.

ಭದ್ರಾವತಿ ಮೂಲದ ಪ್ರಸ್ತುತ ಉತ್ತರಕನ್ನಡ ಜಿಲ್ಲೆಯ ದಾಂಡೇಲಿ ನಿವಾಸಿ ಪಿ.ಜ್ಞಾನರತ್ನಂ ಕೃಪಾ ರಾವ್ ಬಂಧಿತ ಆರೋಪಿ.

ನಗರದ ಅಪಾರ್ಟ್ಮೆಂಟ್ ಒಂದರ ನಿವಾಸಿಯಾಗಿರುವ ವಸಂತಾ ಎಂಬವರು ಮಾರ್ಚ್ 10ರಂದು ಭದ್ರಾವತಿಯಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದರು. ಈ ಸಂದರ್ಭದಲ್ಲಿ ಆರೋಪಿಯು ವಸಂತಾ ಅವರ ಚಿನ್ನಾಭರಣವಿದ್ದ ಬ್ಯಾಗ್ ಕಳವುಗೈದಿದ್ದಾನೆ.

ಈ ಬಗ್ಗೆ ಕದ್ರಿ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾಗಿತ್ತು. ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದರು. ಈಗ ದಾಂಡೇಲಿಯಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು‌ ಬಂಧಿಸಿದ್ದಾರೆ ಹಾಗೂ ಫೈನಾನ್ಸ್ ನಲ್ಲಿ ಅಡವಿರಿಸಿದ್ದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.

Leave A Reply

Your email address will not be published.