ಶಬ್ದ ಮಾಲಿನ್ಯ ಕುರಿತು ಪ್ರಮಾಣ ಪತ್ರ ಸಲ್ಲಿಸಿದ ಪೊಲೀಸ್ ಇಲಾಖೆ | ಪ್ರಮಾಣಪತ್ರಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಹೈಕೋರ್ಟ್

ಬೆಂಗಳೂರು: ನಗರದ ಶಬ್ದಮಾಲಿನ್ಯ ಕುರಿತು ಪ್ರಮಾಣಪತ್ರ ಸಲ್ಲಿಸಿದ್ದ ಗುಪ್ತಚರ ವಿಭಾಗದ ಡಿಸಿಪಿ ಸಂತೋಷ್ ಬಾಬು, ಟ್ರಾಫಿಕ್ ನಿಂದಲೇ ಹೆಚ್ಚಿನ ಶಬ್ದ ಮಾಲಿನ್ಯವಾಗುತ್ತಿದೆ. ಶಬ್ದಮಾಲಿನ್ಯದ ನಿಯಮವನ್ನೇ ಬದಲಿಸಬೇಕು ಎಂದು ಅಭಿಪ್ರಾಯಪಟ್ಟಿದ್ದರು. ಡಿಸಿಪಿ ಸಲ್ಲಿಸಿದ್ದ ಪ್ರಮಾಣಪತ್ರಕ್ಕೆ ಹೈಕೋರ್ಟ್ ಅಸಮಾಧಾನ
ವ್ಯಕ್ತಪಡಿಸಿದೆ.

ಧಾರ್ಮಿಕ ಕೇಂದ್ರಗಳ ಲೌಡ್ ಸ್ಪೀಕರ್ ಬಳಕೆಯ ಬಗ್ಗೆ ಪೊಲೀಸರು ಸರಿಯಾಗಿ ಮಾಹಿತಿ ಸಂಗ್ರಹಿಸಿಲ್ಲ.
ನಗರದ ಧಾರ್ಮಿಕ ಕೇಂದ್ರಗಳಲ್ಲಿ ಧ್ವನಿವರ್ಧಕಗಳಿಂದ ಆಗುತ್ತಿರುವ ಶಬ್ದಮಾಲಿನ್ಯ ತಡೆಗೆ ಕ್ರಮಕೈಗೊಳ್ಳುವಲ್ಲಿ ಪೊಲೀಸ್ ಇಲಾಖೆ ಏನು ಮಾಡಿದೆ ಎಂದು ಪೊಲೀಸರನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.

ಶಬ್ದಮಾಲಿನ್ಯದ ನಿಯಮ ಜಾರಿಗೊಳಿಸಲು ಪೊಲೀಸರು ಹಿಂದೇಟು ಹಾಕುತ್ತಿದ್ದಾರೆ.ಅಕ್ರಮ ಧ್ವನಿವರ್ಧಕಗಳ ವಿರುದ್ಧ ಕೈಗೊಂಡ ಕ್ರಮದ ಮಾಹಿತಿ ಮತ್ತು ಠಾಣೆಗಳಲ್ಲಿ ಶಬ್ದ ಮಾಪಕಗಳ ಲಭ್ಯತೆ ಬಗ್ಗೆ ವಿವರ ನೀಡಬೇಕು ಎಂದು ಬೆಂಗಳೂರು ಪೊಲೀಸ್ ಆಯುಕ್ತರಿಗೆ ಹೈಕೋರ್ಟ್ ಸೂಚನೆ ನೀಡಿದೆ.

ಹಾಗದರೆ ಇನ್ನು ಮುಂದೆ ಮಸೀದಿಯ ಬಾಂಗ್ ಗೆ ಕಡಿವಾಣ ಹಾಕುತ್ತಾ ಪೊಲೀಸ್ ಇಲಾಖೆ??ದೇವಸ್ಥಾನಗಳಲ್ಲಿ ಮೈಕು ಕಟ್ಟಿ ನಡೆಸುವ ಕಾರ್ಯಕ್ರಮಗಳಿಗೆ ತಡೆ ಬೀಳುತ್ತಾ?? ಎಂಬುದನ್ನು ಕಾದು ನೋಡಬೇಕಿದೆ.

Leave A Reply

Your email address will not be published.