ಮಂಗಳೂರು : ರಾಜ್ಯದ ಇತರ ಕಡೆಗಳಲ್ಲಿ ಜೂ.21ರಿಂದ ಕೆಎಸ್ ಆರ್ ಟಿ ಸಿ ಬಸ್ ಓಡಲಿದೆ ಆದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಓಡಿಸಲು ಜಿಲ್ಲಾಡಳಿತ ಅನುಮತಿ ನೀಡದೆ ಇರುವುದರಿಂದ ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಎಸ್ ಆರ್ ಟಿ ಸಿ ಬಸ್ ಸಂಚಾರ ಇರುವುದಿಲ್ಲ ಎಂದು ಮಂಗಳೂರು ಕೆ ಎಸ್ ಆರ್ ಟಿ ಸಿ ವಿಭಾಗದ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಪಾಸಿಟಿವ್ ಪ್ರಕರಣಗಳು ಹೆಚ್ಚಿರುವ ಕಾರಣದಿಂದ ಬೆಳಿಗ್ಗೆ7 ರಿಂದ ಮದ್ಯಾಹ್ನ 1 ರವರೆಗೆ ಮಾತ್ರ ಅಗತ್ಯ ವಸ್ತುಗಳಿಗೆ ಅವಕಾಶ ನೀಡಲಾಗಿದೆ. ರಿಕ್ಷಾ ಹಾಗೂ ಟ್ರಾಕ್ಷಿಗೆ ಮಾತ್ರ ಅನುಮತಿ ನೀಡಲಾಗಿದ್ದು,ಬಸ್ ಸಂಚಾರಕ್ಕೆ ಅನುಮತಿ ನೀಡಲಾಗಿಲ್ಲ.ಇದರಿಂದ ಸದ್ಯ ಸರಕಾರಿ ಬಸ್ ಓಡಾಟ ಇರುವುದಿಲ್ಲ.