ಪ್ರತ್ಯೇಕ ತುಳುನಾಡು ಬೇಡಿಕೆ ಕುಚೋದ್ಯದಿಂದ ಕೂಡಿದೆ | ತುಳುವಿಗೆ ಸಾಂವಿಧಾನಿಕ ಮಾನ್ಯತೆಗೆ ನಾ ಹೋರಾಟ: ಶೋಭಾ ಕರಂದ್ಲಾಜೆ
ಉಡುಪಿ: ತುಳುವಿಗೆ ಸಂವಿಧಾನದ ಮಾನ್ಯತೆ ಸಿಗಬೇಕು ಎಂದು ನಾನು ಸಂಸತ್ತಿನಲ್ಲೂ ನಾನು ಈ ಬಗ್ಗೆ ಮಾತನಾಡಿದ್ದೇನೆ. ಆದರೆ ತುಳುರಾಜ್ಯ ಕುಚೋದ್ಯದ ಬೇಡಿಕೆಗೆ ನಮ್ಮ ಬೆಂಬಲ ಇಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ನಾವು ಕರ್ನಾಟಕದವರು. ತುಳುರಾಜ್ಯ ಎಂಬ ಕುಚೋದ್ಯದ ಬೇಡಿಕೆ ಮತ್ತು ಆಶಯಗಳಿಗೆ ನಮ್ಮ ಯಾವುದೇ ಬೆಂಬಲ ಇಲ್ಲ. ಕರ್ನಾಟಕ ಏಕೀಕರಣವಾದ ಮೇಲೆ ನಾವೆಲ್ಲ ಒಟ್ಟಾಗಿ ಇರಬೇಕಾದವರು. ಒಡಕಿನ ಮಾತುಗಳನ್ನು ಮಹಾರಾಷ್ಟ್ರ ದುರುಪಯೋಗ ಮಾಡುವ ಸಾಧ್ಯತೆಯಿದೆ. ತುಳುನಾಡು ಎಂಬ ಬೇಡಿಕೆ ಸರಿಯಲ್ಲ. ಯಾರೂ ಪ್ರತ್ಯೇಕತೆ ಬಗ್ಗೆ ಮಾತನಾಡಬಾರದು ಎಂದು ಶೋಭಾ ಹೇಳಿದರು.
ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು ಪ್ರಧಾನಿ ಮೋದಿಯನ್ನು ಭೇಟಿಯಾಗಿ ಮಾತನಾಡಿದ್ದಾರೆ. ಗೃಹ ಸಚಿವ ಅಮಿತ್ ಶಾ ಭೇಟಿ ಮಾಡಿ ನಾನು ಮನವಿ ಸಲ್ಲಿಸಿದ್ದೇನೆ. ಎರಡು ಬಾರಿ ಸಂಸತ್ ನಲ್ಲಿ ಪ್ರಸ್ತಾಪ ಮಾಡಿದ್ದೇನೆ. ತುಳುವನ್ನು ಎಂಟನೇ ಪರಿಚ್ಛೇದಕ್ಕೆ ಸೇರಿಸಲು ಏನೆಲ್ಲ ಮಾಡಬೇಕು ಆ ಪ್ರಯತ್ನ ಮಾಡುತ್ತೇವೆ ಎಂದರು.
ಕರ್ನಾಟಕದಲ್ಲಿ ತುಳು ಭಾಷೆಗೆ ಗೌರವ ಸಿಗಬೇಕು. ತುಳು ಭಾಷೆಗಾಗಿ ನಮ್ಮ ಹೋರಾಟ ಇದೆ. ತುಳು ಭಾಷಾ ಅಭಿಮಾನಿಗಳು, ಹೋರಾಟಗಾರರು ಕವಿಗಳು ಕೃತಿಕಾರರ ಮನಸ್ಸಿನ ಭಾವನೆ ಏನೆಂದು ನನಗೆ ತಿಳಿದಿದೆ. ತುಳು ಭಾಷಿಗಳಾಗಿ ಏನೆಲ್ಲ ಮಾಡಬೇಕು ಖಂಡಿತಾ ಮಾಡುತ್ತೇನೆ ಎಂದು ಶೋಭಾ ಕರಂದ್ಲಾಜೆ ತಿಳಿಸಿದರು.