ನಾಳೆಯಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಂಚರಿಸಲಿದೆ ಸರ್ಕಾರಿ, ಖಾಸಗಿ ಬಸ್ಸು…ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ ಹೊರಡಿಸಿದ ಹೊಸ ಮಾರ್ಗಸೂಚಿಯಲ್ಲೇನಿದೆ?
ಜಿಲ್ಲೆಯಾದ್ಯಂತ ನಾಳೆಯಿಂದ ಮಧ್ಯಾಹ್ನ 2ಗಂಟೆಯ ವರೆಗೆ ಎಲ್ಲಾ ಅಂಗಡಿ ಮುಂಗಟ್ಟುಗಳು ತೆರೆಯಲು ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅನುಮತಿಯ ಬೆನ್ನಲ್ಲೇ ಜಿಲ್ಲೆಯಾದ್ಯಂತ ಸರ್ಕಾರಿ ಹಾಗೂ ಖಾಸಗಿ ಬಸ್ಸುಗಳ ಓಡಾಟಕ್ಕೆ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ ಅವರು ಅನುಮತಿ ನೀಡಿದ್ದು, ಹೊಸ ಮಾರ್ಗಸೂಚಿಯನ್ನು ರಚಿಸಿದ್ದಾರೆ.
ಎಲ್ಲಾ ಖಾಸಗಿ ಹಾಗೂ ಸರ್ಕಾರಿ ಬಸ್ಸುಗಳ ಓಡಾಟಕ್ಕೆ ಈಗಾಗಲೇ ಅನುಮತಿ ನೀಡಿದ್ದು, ಸೋಮವಾರದಿಂದ ಶುಕ್ರವಾರ ದವರೆಗೆ ಜಿಲ್ಲೆಯಲ್ಲಿ ಸುಮಾರು 50%ನಷ್ಟು ಪ್ರಯಾಣಿಕರಿಗೆ, ಸಾಮಾಜಿಕ ಅಂತರವನ್ನು ಕಾಯಿದುಕೊಂಡು, ಮಾಸ್ಕ್ ಧರಿಸಿ ಬಸ್ಸಿನಲ್ಲಿ ಸಂಚಾರಕ್ಕೆ ಬೆಳಿಗ್ಗೆ 7ರಿಂದ ಮಧ್ಯಾಹ್ನ 2ರ ವರೆಗೆ ಅವಕಾಶ ಕಲ್ಪಿಸಲಾಗಿದೆ.
ಇದಲ್ಲದೇ ಎಂದಿನಂತೆ ವೀಕೆಂಡ್ ಕರ್ಫ್ಯೂ, ಜೊತೆಗೆ ನೈಟ್ ಕರ್ಫ್ಯೂ ಕೂಡಾ ಜಾರಿಯಲ್ಲಿದ್ದು, ದೇವಸ್ಥಾನ, ಮಸೀದಿ, ಚರ್ಚ್ ಗಳಿಗೆ ತೆರಳಲು ಅವಕಾಶವಿಲ್ಲ.
Whatsapp link
81478 20538