ರಮೇಶ್ ಜಾರಕಿಹೊಳಿ ಸಿಡಿ ಲೇಡಿಗೆ ಬಂಧನ ಭೀತಿ

ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣದಲ್ಲಿ ತನ್ನನ್ನು ಬಂಧಿಸದಂತೆ ಎಸ್‌ಐಟಿಗೆ ನಿರ್ದೇಶಿಸಬೇಕೆಂಬ ಸೀಡಿ ಲೇಡಿಯ ಮನವಿಯನ್ನು ಹೈಕೋರ್ಟ್‌ ನಿರಾಕರಣೆ ಮಾಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಅವರು ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ದಾಖಲಿಸಿರುವ ದೂರನ್ನು ರದ್ದುಪಡಿಸುವಂತೆ ಕೋರಿ ಸೀಡಿ ಯುವತಿ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಸುನೀಲ್‌ ದತ್‌ ಯಾದವ್‌ ಅವರಿದ್ದ ಏಕ ಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ಯುವತಿ ಪರ ವಕೀಲ ಸಂಕೇತ್‌ ಏಣಗಿ ವಾದ ಮಂಡಿಸಿ, ಅತ್ಯಾಚಾರ ಆರೋಪ ಸಂಬಂಧ ಯುವತಿ ದಾಖಲಿಸಿದ ದೂರಿನ ಸಂಬಂಧ ಆರೋಪಿ ರಮೇಶ್‌ ಜಾರಕಿಹೊಳಿ ಅವರನ್ನು ತನಿಖಾಧಿಕಾರಿಗಳು ಬಂಧಿಸಿಲ್ಲ. ಆದರೆ, ರಮೇಶ್‌ ಜಾರಕಿಹೊಳಿ ದಾಖಲಿಸಿರುವ ದೂರಿನ ಸಂಬಂಧ ಯುವತಿ ಬಂಧಿಸುವ ಸಾಧ್ಯತೆಯಿದೆ. ಹೀಗಾಗಿ ಆಕೆಗೆಬಂಧನ ಭೀತಿಯಿದ್ದು, ಅರ್ಜಿದಾರ ಯುವತಿಯನ್ನು ಬಂಧಿಸದಂತೆ ತನಿಖಾಧಿಕಾರಿಗಳಿಗೆ ನಿರ್ದೇಶಿಸುವಂತೆ ಕೋರಿದರು.

ಈ ಕುರಿತು ಪ್ರತಿಕ್ರಿಯೆ ನೀಡಿದ ನ್ಯಾಯಪೀಠ, ರಮೇಶ್‌ ಜಾರಕಿಹೊಳಿ ಅವರು ದಾಖಲಿಸಿರುವ ದೂರನ್ನು ರದ್ದುಪಡಿಸಲು ಕೋರಿ ಸಿಆರ್‌ಪಿಸಿ 482 ಅಡಿ ಸಲ್ಲಿಸಿದ ಅರ್ಜಿ ಇದಾಗಿದೆ. ಹಾಗಾಗಿ, ಅರ್ಜಿದಾರಳನ್ನು ಬಂಧಿಸದಂತೆ ಈ ಅರ್ಜಿಯಲ್ಲಿ ಸೂಚಿಸಲಾಗುವುದಿಲ್ಲ. ಅಗತ್ಯವಿದ್ದರೆ ನಿರೀಕ್ಷಣಾ ಜಾಮೀನು ಕೋರಿ ಪ್ರತ್ಯೇಕ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದೆ.

ಈ ಹಿನ್ನೆಲೆಯಲ್ಲಿ ಸೀಡಿ ಯುವತಿಗೆ ಬಂಧನ ಭೀತಿ ಎದುರಾಗಿದೆ‌.

Leave A Reply

Your email address will not be published.