ಕೋಳಿ ಅಂಕಕ್ಕೆ ಪೊಲೀಸ್ ದಾಳಿ | ಕೋಳಿ ಸಹಿತ ಓರ್ವ ವಶಕ್ಕೆ,ಉಳಿದವರು ಪರಾರಿ,ಸೊತ್ತು ವಶ

ಉಡುಪಿ : ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಒಗ್ಗೇರಬೆಟ್ಟು ಎಂಬಲ್ಲಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ಪೊಲೀಸರು ದಾಳಿ ನಡೆಸಿ ಓರ್ವನನ್ನು ಬಂಧಿಸಿ, ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಯನ್ನು ಪ್ರಜ್ವಲ್ ಎಂದು ಗುರುತಿಸಲಾಗಿದೆ.

ಉಳಿದ ಆರೋಪಿಗಳು ದಾಳಿ ವೇಳೆ ಪರಾರಿಯಾಗಿದ್ದಾರೆ. ಸ್ಥಳದಲ್ಲಿದ್ದ 5 ಹುಂಜ ಕೋಳಿ, 2 ಬಾಳುಕತ್ತಿ, 3 ಬೈಕ್, 510ರೂ. ನಗದು ವಶಪಡಿಸಿಕೊಳ್ಳಲಾಗಿದೆ.

ಈ ಕುರಿತು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply

Your email address will not be published.