ಹುಟ್ಟುಹಬ್ಬದಂದೆ ಆತ್ಮಹತ್ಯೆ ಮಾಡಿಕೊಂಡ‌ ಮೆಡಿಕಲ್ ರೆಪ್ | ಎರಡು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಕಾರ್ತಿಕ್ | ತಂದೆ-ತಾಯಿಯನ್ನು ಕಳೆದುಕೊಂಡ ಬಳಿಕ ಮಾನಸಿಕವಾಗಿ ಕುಗ್ಗಿದ ಯುವಕ

ತನ್ನ ಹುಟ್ಟುಹಬ್ಬದ ದಿನವೇ ವಿಷ ಸೇವಿಸಿ ಮೆಡಿಕಲ್ ರೆಪ್ ಒಬ್ಬರು ಆತ್ಮಹತ್ಯೆಗೈದ ಘಟನೆ ಮೈಸೂರಿಬ ಶ್ರೀರಂಗಪಟ್ಟಣದ ಪಶ್ಚಿಮ ವಾಹಿನಿ ಬಳಿ ನಡೆದಿದೆ.

ಮೈಸೂರಿನ ಎನ್.ಆರ್.ಮೊಹಲ್ಲಾ ನಿವಾಸಿ ಎಸ್.ಕಾರ್ತಿಕ್ (30 ವ) ಎಂಬಾತನೇ ಆತ್ಮಹತ್ಯೆ ಮಾಡಿಕೊಂಡ ಯುವಕ.

ತಂದೆ ತಾಯಿಯನ್ನು ಕಳೆದುಕೊಂಡಿದ್ದ ಕಾರ್ತಿಕ್ ಈ ಹಿಂದೆ ಎರಡು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದು,ಮೂರನೇ ಬಾರಿಗೆ ಸಾವಿಗೀಡಾಗಿದ್ದಾರೆ.

ಕಾರ್ತಿಕ್ ಮೆಡಿಕಲ್ ರೆಪ್ರೆಂಸೆಂಟೇಟಿವ್ ಆಗಿದ್ದು, ಶ್ರೀರಂಗಪಟ್ಟಣದ ಪಶ್ಚಿಮ ವಾಹಿನಿ ಬಳಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಾರ್ತಿಕ್ ವಾಸವಿದ್ದ ಎನ್.ಆರ್.ಮೊಹಲ್ಲಾದ ಕೊಠಡಿಯಲ್ಲಿ ಡೆತ್ ನೋಟ್ ಪತ್ತೆಯಾಗಿದೆ.

“ಸ್ನೇಹಿತರೇ ನನ್ನಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮಿಸಿ. ಇನ್ಮುಂದೆ ನಾನು ನಿಮ್ಮೊಂದಿಗೆ ಇರುವುದಿಲ್ಲ” ಎಂದು ಇಂಗ್ಲಿಷ್‌ನಲ್ಲಿ ಡೆತ್ ನೋಟ್ ಬರೆದಿದ್ದಾರೆ.

ಕಾರ್ತಿಕ್ ರ ತಾಯಿ ಡಾ.ಪಾರ್ವತಿ ಕೆಲ ವರ್ಷಗಳ ಹಿಂದೆ ಮೃತಪಟ್ಟಿದ್ದು,ನಂತರ ತಂದೆ ಶಿವಲಿಂಗಯ್ಯ ಅವರೂ ಮೃತಪಟ್ಟಿದ್ದರು. ಬಳಿಕ ಕಾರ್ತಿಕ್ ಚಿಕ್ಕಮ್ಮನ ಆಸರೆಯಲ್ಲಿದ್ದರು ತಂದೆ ತಾಯಿಯನ್ನು ಕಳೆದುಕೊಂಡಿದ್ದರ ಬಗ್ಗೆ ಮಾನಸಿಕವಾಗಿ ಕುಗ್ಗಿದ್ದರು ಎನ್ನಲಾಗಿದೆ.

ಕಾರ್ತಿಕ್ ಅವರು ಈ ಹಿಂದೆಯೂ ಎರಡು ಬಾರಿ ಆತ್ಮಹತ್ಯೆ ಯತ್ನಿಸಿದ್ದರು.ತಂದೆ-ತಾಯಿ ಕಳೆದುಕೊಂಡು ಆಘಾತಕ್ಕೆ ಒಳಗಾಗಿದ್ದ ಕಾರ್ತಿಕ್ ತಾಯಿ ಸಾವನ್ನಪ್ಪಿದ ದಿನ ವಿಷ ಸೇವಿಸಿದ್ದರು. ಬಳಿಕ ತಂದೆ ಸಾವನ್ನಪ್ಪಿದ ದಿನ ರೈಲಿನಿಂದ ಕೆಳಗೆ ಜಿಗಿದಿದ್ದರು. ಎರಡೂ ಘಟನೆಯಲ್ಲಿ ಕಾರ್ತಿಕ್ ಬದುಕುಳಿದಿದ್ದರು‌.ಮೂರನೇ ಬಾರಿಗೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply

Your email address will not be published.