ರಾಜ್ಯಕ್ಕೆ ಮಹಾರಾಷ್ಟ್ರ, ಕೇರಳದಿಂದ ಬರುವವರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ | ಗಡಿ ಭಾಗದಲ್ಲಿ ಹೆಚ್ಚಿನ ನಿಗಾ ವಹಿಸಲು ಸೂಚನೆ

ಮಹಾರಾಷ್ಟ್ರ ಮತ್ತು ಕೇರಳಗಳಿಂದ ರಾಜ್ಯಕ್ಕೆ ಬರುವವರು ಕೊರೊನಾ ನೆಗೆಟಿವ್‌ ವರದಿ ಹೊಂದಿರುವುದು ಕಡ್ಡಾಯ ಎಂದು ಆರೋಗ್ಯ ಡಾ| ಸುಧಾಕರ್‌ ತಿಳಿಸಿದ್ದಾರೆ.

ಡೆಲ್ಟಾ ಹೆಚ್ಚಿರುವ ಮಹಾರಾಷ್ಟ್ರ, ಕೇರಳಗಳಿಂದ ರಾಜ್ಯಕ್ಕೆ ಬರುವವರ ಮೇಲೆ ನಿಗಾ ಇರಿಸಲಾಗುತ್ತಿದೆ. ಗಡಿ ಭಾಗದಲ್ಲಿ ಹೆಚ್ಚಿನ ನಿಗಾವಹಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.

ಕೊರೊನಾ ರ್ಯಾಪಿಡ್‌ ಆ್ಯಂಟಿಜೆನ್‌ ಪರೀಕ್ಷೆಗೂ ವ್ಯವಸ್ಥೆ ಮಾಡಲಾಗಿದೆ ಎಂದಿದ್ದಾರೆ.

10 ವರ್ಷದೆ ಒಳಗಿನ ಮಕ್ಕಳ ಹೆತ್ತವರಿಗೆ ಆದ್ಯತೆಯಲ್ಲಿ ಲಸಿಕೆ ನೀಡಲಾಗುವುದು. ವೈದ್ಯ ವಿದ್ಯಾರ್ಥಿಗಳು, ಆರೋಗ್ಯ ಸಿಬಂದಿ, ಪೊಲೀಸರ ಕುಟುಂಬ ಹಾಗೂ ಮಾಧ್ಯಮದವರಿಗೂ ಆದ್ಯತೆ ಯಲ್ಲಿ ಲಸಿಕೆ ನೀಡಲಾಗುವುದು ಎಂದರು.

Leave A Reply

Your email address will not be published.