ಪುಲ್ವಾಮ : ಮನೆಗೆ ನುಗ್ಗಿ ಪೊಲೀಸ್ ಅಧಿಕಾರಿ ಮತ್ತು ಪತ್ನಿಯನ್ನು ಕೊಂದ ಉಗ್ರರು

ಜಮ್ಮು ಕಾಶ್ಮೀರದ ಪುಲ್ವಾಮಾ ಎಂಬಲ್ಲಿ ಪೊಲೀಸ್ ವಿಶೇಷಾಧಿಕಾರಿಯೊಬ್ಬರ ಮನೆಗೆ ನುಗ್ಗಿದ ಉಗ್ರರು ವಿಶೇಷ ಅಧಿಕಾರಿ ಮತ್ತು ಅವರ ಪತ್ನಿಯನ್ನು ಹತ್ಯೆ ಮಾಡಿದ ಘಟನೆ ಆದಿತ್ಯವಾರ ನಡೆದಿದೆ.

ಆವಂತಿಪೋರಾದ ಹರಿಪರಿಗಂ ನಿವಾಸಿ,ಪೊಲೀಸ್ ವಿಶೇಷಾಧಿಕಾರಿ ಫಯಾಜ್ ಅಹಮದ್ ಅವರ ಮನೆಗೆ ಆದಿತ್ಯವಾರ ರಾತ್ರಿ 11 ಗಂಟೆಗೆ ನುಗ್ಗಿದ ಭಯೋತ್ಪಾದಕರು ಪತಿ,ಪತ್ನಿಯರ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿ ಹತ್ಯೆಗೈದಿದ್ದಾರೆ.

ಗಂಭೀರವಾಗಿ ಗಾಯಗೊಂಡಿದ್ದ ಫಯಾಜ್ ಅಹಮದ್ ಮತ್ತು ಅವರ ಪತ್ನಿ ರಜಾ ಬೇಗಮ್ ಅವರನ್ನು ಕೂಡಲೇ ಆಸ್ಪತ್ರೆಗೆ ಸೇರಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.ಘಟನೆಯಲ್ಲಿ ಫಯಾಜ್ ಅವರ ಪುತ್ರಿ ರಫಿಯಾ ಗೂ ಗಾಯಗಳಾಗಿದ್ದು,ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆ ಸ್ಥಳವನ್ನು ಭದ್ರತಾ ಪಡೆಗಳು ಸುತ್ತುವರಿದಿದ್ದು, ಉಗ್ರರಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.

Leave A Reply

Your email address will not be published.