ಎಸ್ಎಸ್ಎಲ್ ಸಿ ಪರೀಕ್ಷೆ ದಿನಾಂಕ ಪ್ರಕಟಿಸಿದ ಸಚಿವ ಸುರೇಶ್ ಕುಮಾರ್

ಬೆಂಗಳೂರು: ಕೊನೆಗೂ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಎಸ್ಎಸ್ ಎಲ್.ಸಿ ಮಕ್ಕಳಿಗೆ ಪರೀಕ್ಷಾ ದಿನಾಂಕ ಪ್ರಕಟಿಸಿದೆ.

ಪ್ರಕಟಣೆಗೂ ಮುನ್ನ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರು ಜುಲೈ ಮಾಹೆಯಲ್ಲಿ ನಡೆಯಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆಗಳ ಪೂರ್ವ ಸಿದ್ಧತೆಯನ್ನು ಅವಲೋಕಿಸಿದರು. ಶಿಕ್ಷಣ ಸಚಿವ ಸುರೇಶ್‌ಕುಮಾರ್, ಇಂದು ರಾಜ್ಯದ ಎಲ್ಲ‌ ಜಿಲ್ಲಾ‌ಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಮುಖ್ಯ‌ಕಾರ್ಯ‌ ನಿರ್ವಹಣಾಧಿಕಾರಿಗಳಿಗೆ ವಿಡಿಯೋ‌ ಸಂವಾದದ ಮೂಲಕ ನಿರ್ದೇಶನಗಳನ್ನು ನೀಡಿದರು. ಪರೀಕ್ಷೆಗಳು ಯಶಸ್ವಿಯಾಗಿ ನಡೆಯಲು‌ ಎಲ್ಲ ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಸಭೆಯಲ್ಲಿ ನಿರ್ದೇಶನ ನೀಡಿದರು.

ವಿಧಾನಸೌಧದಲ್ಲಿ ಸೋಮವಾರ ಸುದ್ದಿಗೋಷ್ಠಿ ಮೂಲಕ ಮಾಹಿತಿ ನೀಡಿದ ಸಚಿವ ಸುರೇಶ್ ಕುಮಾರ್,
“ಜುಲೈ 19 ರಂದು ಗಣಿತ, ವಿಜ್ಞಾನ ಹಾಗೂ ಸಮಾಜ ವಿಜ್ಞಾನ ಪರೀಕ್ಷೆ ನಡೆಯಲಿದೆ.

ಜುಲೈ 22 ರಂದು ಭಾಷಾ ವಿಷಯಗಳ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ 8.76 ಲಕ್ಷಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆಯಲಿದ್ದಾರೆ.
7306 ಪರೀಕ್ಷಾ ಕೇಂದ್ರಗಳನ್ನೂ 6 ಸ್ಥಾಪಿಸಲಾಗಿದೆ. ಪರೀಕ್ಷೆಗೆ ಅಗತ್ಯ ಮುನ್ನೆಚ್ಚರಿಕೆ ಕೈಗೊಳ್ಳಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಸೇರಿ‌ ಹಿರಿಯ ಅಧಿಕಾರಿಗಳ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ‌ ಚರ್ಚಿಸಲಾಗಿದೆ.

“ಕಳೆದ ಬಾರಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿತ್ತು. ಈ ಬಾರಿ ವಿಶೇಷ ಪರಿಸ್ಥಿತಿ ಮಧ್ಯೆ ಪರೀಕ್ಷೆ ನಡೆಸಲಾಗುತ್ತಿದೆ. ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸುವ ಕೆಲಸ ಮಾಡಬೇಕಿದೆ. ಆರೋಗ್ಯ ಇಲಾಖೆಯ ಆಧಿಕಾರಿಗಳ ಸಲಹೆ ಪಡೆಯಲಾಗಿದೆ.‌ ವಿದ್ಯಾರ್ಥಿಗಳು ಪರೀಕ್ಷೆಗೆ ಸಕಲ‌ ಸಿದ್ದತೆ ಮಾಡಿಕೊಂಡಿದ್ದಾರೆ. ಸಮಾಜವಿಜ್ಞಾನ, ವಿಜ್ಞಾನ ಹಾಗೂ ಗಣಿತದ ಒಂದು ಪತ್ರಿಕೆ ಹಾಗೂ ಕನ್ನಡ ಹಿಂದಿ‌‌ ಇಂಗ್ಲೀಷ್ ಸೇರಿ‌ ಒಂದು ಪರೀಕ್ಷೆ ನಡೆಯಲಿದೆ “ಎಂದರು. ಕೋವಿಡ್ ಕಾರಣದಿಂದ ಈ ಬಾರಿ ವಿಶೇಷವಾಗಿ ಪರೀಕ್ಷೆ ನಡೆಸಲಾಗುತ್ತಿದೆ. ಈ ಬಾರಿ ಎರಡು ದಿನ ಪರೀಕ್ಷೆ ನಡೆಯಲಿದೆ.

ಜು.19ರಂದು ಕೋರ್ ವಿಷಯಗಳ ಪರೀಕ್ಷೆ (ಸಮಾಜ ವಿಜ್ಞಾನ, ಗಣಿತ, ವಿಜ್ಞಾನ) ಜು. 22ರಂದು ಭಾಷಾ ವಿಷಯಗಳ ಪರೀಕ್ಷೆ ನಡೆಯಲಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದರು.

Leave A Reply

Your email address will not be published.