ವಿಟ್ಲ: ಆಟೋ ಮತ್ತು ದ್ವಿಚಕ್ರ ವಾಹನ ನಡುವೆ ಪರಸ್ಪರ ಡಿಕ್ಕಿ..ಬೈಕ್ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲು

ಆಟೋ ರಿಕ್ಷಾ ಮತ್ತು ದ್ವಿಚಕ್ರ ವಾಹನ ನಡುವೆ ಪರಸ್ಪರ ಡಿಕ್ಕಿ ಸಂಭವಿಸಿ, ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡ ಘಟನೆ ವಿಟ್ಲ ಸಮೀಪದ ಕಂಬಳಬೆಟ್ಟು ಎಂಬಲ್ಲಿ ನಡೆದಿದೆ.

ಗಂಭೀರ ಗಾಯಗೊಂಡ ಸವಾರ ವಿಟ್ಲ ಅಳಿಕೆ ನಿವಾಸಿ ಪ್ರಶಾಂತ್ ಎಂದು ಗುರುತಿಸಲಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ಸವಾರ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದು, ಕೂಡಲೇ ಸ್ಥಳೀಯರ ನೆರವಿನಿಂದ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿದ್ದು, ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Leave A Reply

Your email address will not be published.