ಕಾರು ನಿಯಂತ್ರಣ ತಪ್ಪಿ ಟ್ಯಾಂಕರ್‌ಗೆ ಡಿಕ್ಕಿ | ಕಾರು ಚಲಾಯಿಸುತ್ತಿದ್ದ ಗೃಹರಕ್ಷಕದಳದ ಸಿಬ್ಬಂದಿಗೆ ಗಂಭೀರ ಗಾಯ

ಕಾರು ನಿಯಂತ್ರಣ ತಪ್ಪಿ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಗೃಹರಕ್ಷಕ ದಳದ ಸಿಬ್ಬಂದಿ ಗಂಭೀರ ಗಾಯಗೊಂಡ ಘಟನೆ ಉದ್ಯಾವರ ಎಂಬಲ್ಲಿ ಇಂದು ಮುಂಜಾನೆ ನಡೆದಿದೆ.

 

ಗಾಯಾಳುವನ್ನು ಮೂಲ್ಕಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ರಾಕೇಶ್ (27) ಎಂದು ಗುರುತಿಸಲಾಗಿದೆ.

ರಾಕೇಶ್ ರಾತ್ರಿ ಪಾಳಿಯ ಕರ್ತವ್ಯ ಮುಗಿಸಿ ಇಂದು ಮುಂಜಾನೆ 5:30ರ ಸುಮಾರಿಗೆ ಮುಲ್ಕಿಯಿಂದ ತನ್ನ ಕಾರಿನಲ್ಲಿ ಉಡುಪಿಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಉದ್ಯಾವರದ ಬಳಿ ರಾಕೇಶ್ ಚಲಾಯಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಎದುರಿನಿಂದ ತೆರಳುತ್ತಿದ್ದ ಟ್ಯಾಂಕರ್ ನ ಹಿಂಭಾಗಕ್ಕೆ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.

ಗಂಭೀರ ಗಾಯಗೊಂಡ ಅವರನ್ನು ಅಜ್ಜರಕಾಡು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

Leave A Reply

Your email address will not be published.