6 ತಿಂಗಳಲ್ಲಿ 1,242 ಸಹಾಯಕ ಪ್ರಾಧ್ಯಾಪಕರು ಹಾಗೂ 310 ಪ್ರಾಂಶುಪಾಲರ ನೇರ ನೇಮಕಾತಿ | ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ ನಾರಾಯಣ

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿ ಮಾಡುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಇನ್ನು ಆರು ತಿಂಗಳಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ 1,242 ಸಹಾಯಕ ಪ್ರಾಧ್ಯಾಪಕರು ಹಾಗೂ 310 ಪ್ರಾಂಶುಪಾಲರನ್ನು ನೇರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ. 

ಬೆಂಗಳೂರಿನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪ್ರಸ್ತಾವನೆಗೆ ಹಣಕಾಸು ಇಲಾಖೆ ಒಪ್ಪಿಗೆ ನೀಡಿದ್ದು, ಆರು ತಿಂಗಳ ಒಳಗಾಗಿ ಎಲ್ಲ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುವುದಲ್ಲದೇ, ಎಲ್ಲ ಪ್ರಕ್ರಿಯೆ ಪಾರದರ್ಶಕವಾಗಿರುತ್ತದೆ. ಅರ್ಹತೆ ಆಧಾರದ ಮೇಲೆಯೇ ಇಡೀ ನೇಮಕಾತಿ ಆಗಲಿದೆ ಎಂದು ಡಿಸಿಎಂ ಹೇಳಿದರು.

ಹಾಗೆಯೇ ಸಂದರ್ಶನ ಇಲ್ಲದೆಯೇ ಲಿಖಿತ ಪರೀಕ್ಷೆ ಮೂಲಕವೇ ಇಷ್ಟು ಹುದ್ದೆಗಳನ್ನು ತುಂಬಲಾಗುತ್ತದೆ ಎಂದರು.
 

Leave A Reply

Your email address will not be published.