ಕರಾವಳಿಯಲ್ಲಿ ಜುಲೈ 5 ರ ತನಕ ಗುಡುಗು ಸಹಿತ ಮಳೆ ಸಾಧ್ಯತೆ

ಕರಾವಳಿ ಜಿಲ್ಲೆಗಳಲ್ಲಿ ನಾಲ್ಕೈದು ದಿನಗಳ ಮಳೆಯಿಂದ ಹಳದಿ ಅಲರ್ಟ್ ಘೋಷಿಸಲಾಗಿದ್ದು, ಇನ್ನೆರಡು ದಿನಗಳ ಕಾಲ ಕರಾವಳಿಯಲ್ಲಿ ಗುಡುಗು ಸಹಿತ ಮಳೆ ಮುಂದುವರೆಯುವ ಸಾಧ್ಯತೆಯಿದೆ ಎನ್ನಲಾಗಿದೆ.

ಕಳೆದ ಒಂದು ವಾರದಿಂದ ಕರಾವಳಿಯ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಕೂಡ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಜುಲೈ 5ರವರೆಗೆ ಉತ್ತಮ ಮಳೆಯಾಗಲಿದ್ದು,ನೈರುತ್ಯ ಮುಂಗಾರು ದುರ್ಬಲವಾದ್ದರಿಂದ ಕರಾವಳಿಯಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ಇನ್ನೆರಡು ದಿನಗಳ ಕಾಲ ಗುಡುಗು ಸಹಿತ ಮಳೆ ಮುಂದುವರೆಯುವ ಸಾಧ್ಯತೆಯಿದೆ ಎಂದು ವರದಿಗಳು ತಿಳಿಸಿವೆ.

Leave A Reply

Your email address will not be published.