ಮಾನಹಾನಿ ಸುದ್ದಿ ಪ್ರಕಟಿಸದಂತೆ ತಡೆಯಾಜ್ಞೆ: ಡಿ.ವಿ.ಸದಾನಂದ ಗೌಡ ಸ್ಪಷ್ಟನೆ
ಬೆಂಗಳೂರು: ತಮ್ಮ ಮಾನಕ್ಕೆ ಹಾನಿ ತರುವ ಯಾವುದೇ ಸುದ್ದಿಯನ್ನು ಪ್ರಕಟಿಸಬಾರದು ಎಂದು ಮಾಧ್ಯಮಗಳ ವಿರುದ್ಧ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರು ಬೆಂಗಳೂರು ಸಿಟಿ ಸಿವಿಲ್ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ.
ಈ ಮಧ್ಯೆ, ಚುನಾವಣೆ, ಸಂಪುಟ ರಚನೆ ಸಂದರ್ಭದಲ್ಲಿ ವಿರೋಧಿಗಳು ಈ ಮುಂಚೆಯೂ ನನ್ನ ವೈಯಕ್ತಿಕ ತೇಜೋವಧೆಗೆ ಪ್ರಯತ್ನಿಸಿದ್ದರು. ಮಾಧ್ಯಮ ಸ್ವಾತಂತ್ರ್ಯವನ್ನು ನಾನು ಸಂಪೂರ್ಣ ಗೌರವಿಸುತ್ತೇನೆ. ಆದರೆ ವಿರೋಧಿಗಳ ಸಂಚಿಗೆ ಬಲಿಯಾಗಿ ತಪ್ಪು ಮಾಹಿತಿ ಪ್ರಸರಣದಲ್ಲಿ ತೊಡಗಬಾರದೆಂಬ ಉದ್ದೇಶದಿಂದ ನಿರ್ಬಂಧ ಆದೇಶ ತರಬೇಕಾಗಿ ಬಂತು. ದಯವಿಟ್ಟು ಯಾರೂ ಅನ್ಯಥಾ ಭಾವಿಸಬಾರದು ಎಂದು ಡಿವಿಎಸ್ ಟ್ವೀಟ್ ಮಾಡಿದ್ದಾರೆ.