ಪುತ್ತೂರು : ಅಕ್ರಮ ಮದ್ಯ ಮಾರಾಟ ಇಬ್ಬರ ಬಂಧನ, ಮದ್ಯ ವಶ

ಪುತ್ತೂರು: ಮನೆಯೊಂದರ ಬಳಿ ಭಾರೀ ಪ್ರಮಾಣದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆ ಮಾಡಿದ ಪೊಲೀಸರು ಇಬ್ಬರನ್ನು ಬಂಧಿಸಿರುವ ಘಟನೆ ಮುಂಡೂರಿನ ನೈತ್ತಾಡಿ ಎಂಬಲ್ಲಿ ಜು.3ರಂದು ನಡೆದಿದೆ.

ನೈತಾಡಿಯ ಮನೆಯೊಂದರಲ್ಲಿ ಕಳೆದ ಕೆಲ ದಿನಗಳಿಂದ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಕುರಿತು ಮಾಹಿತಿಯ ಹಿನ್ನೆಲೆಯಲ್ಲಿ ಪುತ್ತೂರು ನಗರ ಪೊಲೀಸರು ದಾಳಿ ನಡೆಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಗಣೇಶ್ ಮತ್ತು ಬಾಬು ಎಂಬವರನ್ನು ಬಂಧಿಸಿ ಅಕ್ರಮವಾಗಿ ದಾಸ್ತಾನಿರಿಸಲಾಗಿದ್ದ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

Leave A Reply

Your email address will not be published.