ಹನಿಟ್ರ್ಯಾಪ್ ಪ್ರಕರಣ : ಸವಣೂರಿನ ಇಬ್ಬರು,ಕೊಟ್ಯಾಡಿ ಓರ್ವನನ್ನು ಬಂಧಿಸಿದ ಸಂಪ್ಯ ಪೊಲೀಸರು | ಕಾರು, ಆಟೋ ರಿಕ್ಷಾ, ಮೊಬೈಲ್‌ಗಳು, ರೂ. 7.5 ಲಕ್ಷ ನಗದು ವಶಕ್ಕೆ

ನೆಟ್ಟಣಿಗೆ ಮುಡ್ನೂರು ಗ್ರಾಮದ ಚೀಚಗದ್ದೆ ನಿವಾಸಿ ಅಬ್ದುಲ್ ನಾಸೀರ್ (25ವ.) ಅವರು ಹನಿಟ್ರ್ಯಾಪ್‌ಗೆ ಬಲಿಯಾಗಿ ರೂ.30 ಲಕ್ಷ ಕಳೆದುಕೊಂಡಿರುವುದಾಗಿ ಪೊಲೀಸರಿಗೆ ದೂರು ನೀಡಿದ್ದು ಒಟ್ಟು ಏಳು ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ.

ಹನಿಟ್ರ್ಯಾಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸವಣೂರು ಸನಿಹದ ಸರ್ವೆ ಬಳಿ ಪೊಲೀಸರು ಸೋಮವಾರ ಬೆಳಗ್ಗೆ ಮೂವರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬಂಧಿತರನ್ನು ಸವಣೂರಿನ ಅಜರ್, ನಸೀರ್ ಎನ್ನಲಾಗಿದ್ದು ಖಚಿತ ಮಾಹಿತಿ ಮೇರೆಗೆ ಸರ್ವೆ ಸೇತುವೆ ಬಳಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಒಟ್ಟು ನಾಲ್ವರ ಬಂಧನ..!:

ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಯುವತಿಯನ್ನು ಬಂಧಿಸಲಾಗಿದೆ. ಮೂವರನ್ನು ಆರೋಪಿಗಳನ್ನು ಸೋಮವಾರ ಬಂಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರ ಸಂಖ್ಯೆ ನಾಲ್ಕಕ್ಕೇರಿದೆ ಎಂಬ ಮಾಹಿತಿ ಲಭಿಸಿದೆ.

ನೆಟ್ಟಣಿಗೆ ಮುಡ್ನೂರು ಗ್ರಾಮದ ಚೀಚಗದ್ದೆ ನಿವಾಸಿ ಅಬ್ದುಲ್ ನಾಸೀರ್ (25ವ.) ಅವರು ಹನಿಟ್ರ್ಯಾಪ್‌ಗೆ ಬಲಿಯಾಗಿ ರೂ.30 ಲಕ್ಷ ಕಳೆದುಕೊಂಡಿರುವುದಾಗಿ ಪೊಲೀಸರಿಗೆ ದೂರು ನೀಡಿದ್ದು ಒಟ್ಟು ಏಳು ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ.

Leave A Reply

Your email address will not be published.