ಪುತ್ತೂರು,ಕಡಬ : ಆರೋಗ್ಯ ಕೇಂದ್ರಗಳಲ್ಲಿಯೇ ಲಸಿಕಾಕರಣ ನಡೆಸಲು ಸೂಚನೆ

ಪುತ್ತೂರು: ಕಡಬ,ಪುತ್ತೂರು ತಾಲೂಕಿನ ಆರೋಗ್ಯ ಕೇಂದ್ರಗಳಲ್ಲಿಯೇ ಲಸಿಕಾಕರಣ ನಡೆಸುವಂತೆ ತಾಲೂಕು ಆರೋಗ್ಯಾಧಿಕಾರಿ ಸೂಚನೆ ನೀಡಿದ್ದಾರೆ.

 

ಸಮುದಾಯ ಆರೋಗ್ಯ ಕೇಂದ್ರ ಉಪ್ಪಿನಂಗಡಿ, ಕಡಬ,ಸಾರ್ವಜನಿಕ ಆಸ್ಪತ್ರೆ ಪುತ್ತೂರು, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ನೆಲ್ಲಿಕಟ್ಟೆ ಪುತ್ತೂರು ಇವುಗಳನ್ನು ಹೊರತು ಪಡಿಸಿ ಉಳಿದ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಒಬ್ಬರೇ ವೈದ್ಯರಿರುವುದರಿಂದ ಆರೋಗ್ಯ ಕೇಂದ್ರಗಳಲ್ಲಿ ಮಾತ್ರವೇ ಕೋವಿಡ್ ಲಸಿಕಾಕರಣ ನಡೆಸುವಂತೆ ತಾಲೂಕು ಆರೋಗ್ಯಾಧಿಕಾರಿ ಅವರು ಎಲ್ಲಾ ಆರೋಗ್ಯ ಕೇಂದ್ರಗಳ ಆಡಳಿತ ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇನ್ಮುಂದೆ ಶಾಲೆ ಸೇರಿದಂತೆ ಇತರ ಕಡೆಗಳಲ್ಲಿ ಲಸಿಕಾಕರಣ ನಡೆಯುವುದಿಲ್ಲ. ಸಾರ್ವಜನಿಕರು ಆರೋಗ್ಯ ಕೇಂದ್ರಗಳಲ್ಲಿಯೇ ಲಸಿಕೆ ಪಡೆಯಬೇಕಾಗಿದೆ.

Leave A Reply

Your email address will not be published.