ನೆಟ್ಟಣ: ಮನೆಯೊಂದಕ್ಕೆ ಅರಣ್ಯಾಧಿಕಾರಿಗಳ ದಾಳಿ| ಕಾಡು ಪ್ರಾಣಿಯ ಮಾಂಸ ಪತ್ತೆ, ಓರ್ವ ವಶಕ್ಕೆ

ಕಡಬ : ಖಚಿತ ಮಾಹಿತಿಯ ಮೇರೆಗೆ ಮನೆಯೊಂದಕ್ಕೆ ಸುಬ್ರಹ್ಮಣ್ಯ ವಲಯಾರಣ್ಯಧಿಕಾರಿಗಳು ದಾಳಿ ನಡೆಸಿ ಕಾಡು ಪ್ರಾಣಿಯೊಂದರ ಮಾಂಸದೊಂದಿಗೆ ಓರ್ವ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಂಡ ಘಟನೆ ಜು.6 ರ ಸಂಜೆ 4 ಗಂಟೆ ಸುಮಾರಿಗೆ ನಡೆದಿದೆ.

 

ಸುಬ್ರಹ್ಮಣ್ಯ ವಲಯಾರಣ್ಯಧಿಕಾರಿಗಳ ನೇತೃತ್ವದಲ್ಲಿ ನೆಟ್ಟಣ ವಾಲ್ತಾಜೆ ರಮೇಶ್ ಎಂಬವರ ಮನೆಗೆ ದಾಳಿ ನಡೆಸಿದ್ದು ಈ ಸಂದರ್ಭದಲ್ಲಿ ಮನೆಯಲ್ಲಿ ಕಾಡು ಪ್ರಾಣಿಯೊಂದರ ಮಾಂಸ ಪತ್ತೆಯಾಗಿತ್ತು ಎನ್ನಲಾಗಿದ್ದು ಈ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Leave A Reply

Your email address will not be published.