ಪುತ್ತೂರು : ಅಮರ್ ಜವಾನ್ ಜ್ಯೋತಿಗೆ ಹಾನಿ | ಕ್ರಮಕ್ಕೆ ಒತ್ತಾಯ
ಪುತ್ತೂರಿನ ಕಿಲ್ಲೇ ಮೈದಾನದ ಬಳಿ ಇರುವ ಅಮರ್ ಜವಾನ್ ಜ್ಯೋತಿಗೆ ಹಾನಿ ಆಗಿರುವ ಘಟನೆ ಜು.6ರಂದು ಬೆಳಿಗ್ಗೆ ಬೆಳಕಿಗೆ ಬಂದಿದೆ.ಘಟನೆ ಕುರಿತು ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಪುತ್ತೂರಿನ ನಟ್ಟೋಜ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮುಂದಾಳತ್ವದ ಅಂಬಿಕಾ ವಿದ್ಯಾಲಯದ ಆಶ್ರಯದಲ್ಲಿ ಭಾರತೀಯ ವೀರ ಯೋಧರ ಸ್ಮರಣಾರ್ಥ 2017 ರಲ್ಲಿ ಲೋಕಾಪರ್ಣೆಗೊಂಡ ಅಮರ್ ಜವಾನ್ ಜ್ಯೋತಿಗೆ ಕಿಡಿಗೇಡಿಗಳು ಹಾನಿ ಮಾಡಿದ್ದಾರೆ.
ಇಂದು ಬೆಳಿಗ್ಗೆ ಅಂಬಿಕಾ ವಿದ್ಯಾಸಂಸ್ಥೆಯ ಮೆನೇಜರ್ ರವೀಂದ್ರರವರು ಸ್ಮಾರಕದ ಶುಚಿತ್ವಕ್ಕೆ ತೆರಳಿದಾಗ ಘಟನೆ ಬೆಳಕಿಗೆ ಬಂದಿದೆ. ಘಟನಾ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಅಮರ್ ಜವಾನ್ ಜ್ಯೋತಿ ಸ್ಮಾರಕಕ್ಕೆ ಹಾನಿಮಾಡಿರುವುದು ಯೋಧರ ತ್ಯಾಗಕ್ಕೆ ಮಾಡಿದ ಅವಮಾನ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಹೇಳಿದ್ದಾರೆ.
ಅಮರ್ ಜವಾನ್ ಜ್ಯೋತಿ ಸ್ಮಾರಕಕ್ಕೆ ಹಾನಿ ಮಾಡಿದವರ ಮೇಲೆ ಸೂಕ್ತ ಕಾನೂನು ಕ್ರಮ ಜರಗಿಸುವಂತೆ ನಿವೃತ್ತ ಸೈನಿಕರ ಸಂಘದಿಂದ ಮನವಿ ಮಾಡಿದೆ.