ಮಾಜಿ ಕೇಂದ್ರ ಸಚಿವರ ಪತ್ನಿಯ ಬರ್ಬರ ಹತ್ಯೆ | ಓರ್ವ ವಶಕ್ಕೆ

ನವದೆಹಲಿ: ಮಾಜಿ ಕೇಂದ್ರ ಸಚಿವ ಪಿ. ರಂಗರಾಜನ್ ಕುಮಾರ ಮಂಗಲಂ ಅವರ ಪತ್ನಿ ಕಿಟ್ಟಿ ಕುಮಾರ ಮಂಗಲಂ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ನವದೆಹಲಿಯ ಪ್ರತಿಷ್ಠಿತ ವಸಂತ ವಿಹಾರ್ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಇತರ ಇಬ್ಬರು ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

ವಿಶೇಷ ತನಿಖಾ ತಂಡ ರಚಿಸಲಾಗಿದ್ದು, ಶೀಘ್ರವೇ ಆರೋಪಿಗಳನ್ನು ಬಂಧಿಸುವ ವಿಶ್ವಾಸವನ್ನು ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ.

Leave A Reply

Your email address will not be published.