ನೇಣುಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ

ನೇಣುಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಯುವತಿಯೊಬ್ಬಳ ಶವವು ಕಾಸರಗೋಡು ನಗರ ಪೊಲೀಸ್ ಠಾಣಾ ವ್ಯಾಪ್ತಿಯಿಂದ ವರದಿಯಾಗಿದೆ.

ಕಸಬಾ ತೀರದ ಪುಷ್ಪಾ-ಅಶೋಕನ್ ಅವರ ಪುತ್ರಿ ಅಶ್ವತ್ಥಿ ಎಂಬಾಕೆಯೇ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಯುವತಿ.

ಅವರ ಮನೆಯ ಕೋಣೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಮೃತ ದೇಹ ಪತ್ತೆಯಾಗಿದ್ದು, ಕೃತ್ಯಕ್ಕೆ ಕಾರಣ ತಿಳಿದುಬಂದಿಲ್ಲ.

ಮೃತಶರೀರವನ್ನು ಕಾಸರಗೋಡಿನ ಜನರಲ್ ಆಸ್ಪತ್ರೆಗೆ ಕೊಂಡೊಯ್ದಿದ್ದು,ಮರಣೋತ್ತರ ಪರೀಕ್ಷೆಯ ಬಳಿಕ ಸಂಬಂಧಿಕರಿಗೆ ಬಿಟ್ಟು ಕೊಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Leave A Reply

Your email address will not be published.