ಸಿಡಿಲಿನ ಜತೆ ಸೆಲ್ಫಿ ತೆಗೆದುಕೊಳ್ಳುವ ಭಯಾನಕ ಹುಚ್ಚು | ಸಿಡಿಲಾಘಾತಕ್ಕೆ 16 ಬಲಿ !!

ರಾಜಸ್ತಾನದ ಜೈಪುರ ಸಮೀಪದ ಅಮರ್ ಕೋಟೆಯಲ್ಲಿ ಸಿಡಿಲಿನ ಆಘಾತಕ್ಕೆ 16 ಮಂದಿ ಪ್ರವಾಸಿಗರು ಪ್ರಾಣ ಕಳೆದುಕೊಂಡಿದ್ದಾರೆ.

12ನೇ ಶತಮಾನದ ಅಮೆರ್ ಪ್ಯಾಲೆಸ್‌ನ ವಾಚ್ ಟವರ್ ಮೇಲೆ ಮಳೆಯಲ್ಲೇ ಸೆಲ್ಫಿ ತೆಗೆದುಕೊಳ್ಳುತ್ತಿದ್ದ‌ ಸಂದರ್ಭದಲ್ಲಿ ಸಿಡಿಲು ಬಡಿದಿದೆ. ಇನ್ನು ಕೆಲವರು ಸಿಡಿಲಿನ ಶಬ್ದಕ್ಕೆ ಭಯಭೀತರಾಗಿ ವಾಚ್ ಟವರ್ ಮೇಲಿಂದ ಧುಮುಕಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ಕೋಟೆಯಲ್ಲಿದ್ದ 29 ಮಂದಿಯನ್ನು ರಕ್ಷಿಸಲಾಗಿದೆ ಎಂದು ಜೈಪುರ ಪೊಲೀಸ್ ಆಯುಕ್ತ ಆನಂದ್ ಶ್ರೀವಾಸ್ತವ ತಿಳಿಸಿದ್ದಾರೆ. ಘಟನೆ ಬಗ್ಗೆ ಸಂತಾಪ ಸೂಚಿಸಿರುವ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲಟ್ ಅವರು ಮೃತಪಟ್ಟವರ ಕುಟುಂಬಗಳಿಗೆ 5 ಲಕ್ಷ ಪರಿಹಾರ ಘೋಷಿಸಿದ್ದಾರೆ.

ಇನ್ನು ಉತ್ತರ ಪ್ರದೇಶದ ವಿವಿಧೆಡೆಗಳಲ್ಲಿ ಸಿಡಿಲಿಗೆ 41 ಮಂದಿ ಬಲಿಯಾಗಿದ್ದರೆ, ಮಧ್ಯಪ್ರದೇಶದಲ್ಲಿ ಏಳು ಜನರು, ರಾಜಸ್ಥಾನದಲ್ಲಿ 20 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟಾರೆಯಾಗಿ ಸುಮಾರು 68 ಜನರು ಸಿಡಿಲಿನ ಆಘಾತಕ್ಕೆ ಬಲಿಯಾಗಿದ್ದಾರೆ.

Leave A Reply