ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ | ಅಪರಾಧಿಗಳಿಂದ ಜಿಲ್ಲಾ ನ್ಯಾಯಾಲಯದ ಆದೇಶಕ್ಕೆ ತಡೆಯಾಜ್ಞೆ ಕೋರಿ ಮೇಲ್ಮನವಿ

ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಜೀವಾವಧಿ ಶಿಕ್ಷೆಯಾಗಿ ಜೈಲು ಪಾಲಾಗಿರುವ ಭಾಸ್ಕರ ಶೆಟ್ಟಿಯವರ ಪತ್ನಿ ರಾಜೇಶ್ವರಿ ಶೆಟ್ಟಿ ಹಾಗೂ ಪುತ್ರ ನವನೀತ ಶೆಟ್ಟಿ ಅವರು ಜಿಲ್ಲಾ ನ್ಯಾಯಾಲಯದ ಆದೇಶಕ್ಕೆ ತಡೆಯಾಜ್ಞೆ ಕೋರಿ ಮೇಲ್ಮನವಿ ಮತ್ತು ಜಾಮೀನು ಅರ್ಜಿ ಸಲ್ಲಿಸಿದ್ದಾರೆ.

ಜು.5ರಂದು ರಾಜೇಶ್ವರಿ ಶೆಟ್ಟಿ ಹಾಗೂ ಜು.7ರಂದು ನವನೀತ್‌ ಶೆಟ್ಟಿ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ವಿಷಯ ತಡವಾಗಿ ಬೆಳಕಿಗೆ ಬಂದಿದೆ. ಮೂರು ವಾರದ ಬಳಿಕ ಅರ್ಜಿಗಳ ವಿಚಾರಣೆ ನಡೆಯುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

ಐದು ವರ್ಷಗಳ ಹಿಂದೆ ಸಂಚಲನ ಉಂಟು ಮಾಡಿದ್ದ ಉಡುಪಿಯ ಎನ್‌ ಆರ್‌ಐ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದ ಅಪರಾಧಿಗಳಾದ ಪತ್ನಿ ರಾಜೇಶ್ವರಿ ಶೆಟ್ಟಿ, ಪುತ್ರ ನವನೀತ್‌ ಶೆಟ್ಟಿ, ಜ್ಯೋತಿಷಿ ನಿರಂಜನ್‌ ಭಟ್‌ಗೆ ಜೀವಿತಾವಧಿ ಶಿಕ್ಷೆ ವಿಧಿಸಿ ಉಡುಪಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಸುಬ್ರಹ್ಮಣ್ಯ ಜೆ.ಎನ್‌. ಅವರು ಜೂ.8 ರಂದುತೀರ್ಪುನೀಡಿದ್ದರು.

ಐದನೇ ಆರೋಪಿ ಚಾಲಕ ರಾಘವೇಂದ್ರ ಅವರನ್ನು ಆರೋಪ ಮುಕ್ತಗೊಳಿಸಲಾ ಗಿತ್ತು. ಆರೋಪಿ ನಿರಂಜನ ಭಟ್‌ನ ತಂದೆ ಈ ಹಿಂದೆಯೇ ಅನಾರೋಗ್ಯದಿಂದ ಸಾವನ್ನಪ್ಪಿದ್ದರು. ಉಳಿದ ಆರೋಪಿಗಳು ಪರಪ್ಪನ ಆಗ್ರಹಾರದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ

Leave A Reply

Your email address will not be published.