ದಕ್ಷಿಣಕನ್ನಡ, ಮೂಡಬಿದಿರೆ | ಆಳ್ವಾಸ್ ಶಿಕ್ಷಣ ಸಂಸ್ಥೆಯ ಇಬ್ಬರು ಕ್ರೀಡಾ ವಿದ್ಯಾರ್ಥಿಗಳು ಈ ಸಲದ ಟೋಕಿಯೋ ಒಲಿಂಪಿಕ್ ನಲ್ಲಿ ಭಾಗಿ !
ಮೂಡುಬಿದಿರೆ: ಜಪಾನಿನ ಟೋಕಿಯೋದಲ್ಲಿ ಜುಲೈ 23 ರಿಂದ ನಡೆಯಲಿರುವ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಇಬ್ಬರು ಕ್ರೀಡಾ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.
ಮೂಡಬಿದಿರೆಯ ಆಳ್ವಾಸ್ನ ಕ್ರೀಡಾ ವಿಭಾಗ ದತ್ತು ಶಿಕ್ಷಣ ಯೋಜನೆಯಲ್ಲಿ ವ್ಯಾಸಂಗ ಮಾಡುತ್ತಿರುವ ಧನಲಕ್ಷ್ಮೀ ಹಾಗೂ ಶುಭಾ 400 ಮೀಟರ್ ಮಿಕ್ಸೆಡ್ ರಿಲೇಯಲ್ಲಿ ದೇಶದ ತಂಡವನ್ನು ಅವರು ಪ್ರತಿನಿಧಿಸುತ್ತಿದ್ದಾರೆ. ಈ ಇಬ್ಬರೂ ಪ್ರತಿಭಾವಂತ ಕ್ರೀಡಾ ವಿದ್ಯಾರ್ಥಿಗಳು 2016-17ನೇ ಶೈಕ್ಷಣಿಕ ವರ್ಷದಿಂದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳಾಗಿ ಮಂಗಳೂರು ವಿಶ್ವವಿದ್ಯಾಲಯ ಹಾಗೂ ಅಖಿಲಭಾರತ ಅಂತರ್ ವಿಶ್ವವಿದ್ಯಾಲಯ ಕೂಟಗಳಲ್ಲಿ ಭಾಗವಹಿಸಿದ್ದರು.
ಮೂಡಬಿದ್ರೆಯ ಆಳ್ವಾಸ್ ವಿದ್ಯಾಸಂಸ್ಥೆಯ ಹಲವು ಕ್ರೀಡಾ ವಿದ್ಯಾರ್ಥಿಗಳು ಈಗಾಗಲೇ ಒಲಿಂಪಿಕ್ಸ್ನಲ್ಲಿ ಸಾಧನೆ ಮಾಡಿದ್ದು, ಈ ಬಾರಿ ಆಯ್ಕೆಯಾದ ಕ್ರೀಡಾ ವಿದ್ಯಾರ್ಥಿಗಳಿಗೆ ತಲಾ 1 ಲಕ್ಷ ರೂ.ಗಳ ಪ್ರೋತ್ಸಾಹಧನ ನೀಡಿದ್ದಾಗಿ ಡಾ.ಎಂ.ಮೋಹನ ಆಳ್ವ ತಿಳಿಸಿದ್ದಾರೆ.