ಕಾವಳ ಕಟ್ಟೆ ಕಲಹ | ಎರಡು ವಿಭಿನ್ನ ಪ್ರತಿಭಟನೆಗೆ ಸೇರಿದ್ದ ಕಾಂಗ್ರೆಸ್ ಮತ್ತು ಬಿಜೆಪಿ ತಂಡಗಳು ಉದ್ದೇಶ ಮರೆತು ಪರಸ್ಪರ ಕಚ್ಚಾಟಕ್ಕೆ ನಿಂತ ಘಟನೆ !

ಪ್ರತ್ಯೇಕ ಉದ್ದೇಶಗಳಿಗೆ ಪ್ರತಿಭಟನೆ ನಡೆಸಲು ಜಮಾಯಿಸಿದ್ದ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ವಾಗ್ವಾದವು ಪರಸ್ಪರ ತಳ್ಳಾಟ, ನೂಕಾಟಕ್ಕೆ ಎಡೆಮಾಡಿಕೊಟ್ಟ ಘಟನೆ ಕಾವಳಕಟ್ಟೆಯಲ್ಲಿ ಇಂದು ನಡೆಯಿತು.

ಕಾವಳಮೂಡೂರು ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಕಚೇರಿ ಮುಂಭಾಗ ಪ್ರತಿಭಟನೆ ಸಿದ್ಧತೆ ನಡೆಸಿದ್ದರು. ಇದೇ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಕಾವಳಮೂಡೂರು ಗ್ರಾ.ಪಂ ನೀರು ಹಾಗೂ ಮನೆ ತೆರಿಗೆಯನ್ನು ಏಕಾಏಕಿ ಏರಿಸಿರುವುದನ್ನು ವಿರೋಧಿಸಿ ಪ್ರತಿಭಟನೆಗೆ ಮುಂದಾಗಿದ್ದರು.

ಈ ಹಂತದಲ್ಲಿ ಆರ್‌ಟಿಐ ಕಾರ್ಯಕರ್ತ ಪದ್ಮನಾಭ ಮಯ್ಯ ಪ್ರತಿಭಟನೆಯಲ್ಲಿ ಕಾಣಿಸಿಕೊಂಡಿದನ್ನು ಕಾಂಗ್ರೆಸ್ ಕಾರ್ಯಕರ್ತರು ಪ್ರಶ್ನಿಸಿದಾಗ, ಬಿಜೆಪಿ ಕಾರ್ಯಕರ್ತರು ಅದಕ್ಕೆ ಆಕ್ಷೇಪಿಸಿದರು. ಈ ಸಂದರ್ಭ ಉಭಯ ಪಕ್ಷದ ಕಾರ್ಯಕರ್ತರ ನಡುವೆ ನೂಕಾಟ, ಪರಸ್ಪರ ತಳ್ಳಾಟ ನಡೆಯಿತು.

Ad Widget


Ad Widget


Ad Widget

Ad Widget


Ad Widget

ಇದೇ ವೇಳೆ ಆರ್‌ಟಿಐ ಕಾರ್ಯಕರ್ತ ಪದ್ಮನಾಭ ಮಯ್ಯ ಅವರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದರು ಎಂದು ಆರೋಪಿಸಿದ ಹಿನ್ನೆಲೆ ಪ್ರತಿಭಟನೆಯ ರೂಪ ಬದಲಾಯಿತು. ಉಭಯ ಪಕ್ಷದ ಕಾರ್ಯಕರ್ತರು ಧಿಕ್ಕಾರ ಕೂಗಿದರು. ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾದ ಹಿನ್ನೆಲೆಯ ಪುಂಜಾಲಕಟ್ಟೆ ಎಸ್‌ಐ ಸೌಮ್ಯಾ ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದರು.

ಉಭಯ ಪಕ್ಷದ ನಾಯಕರ ನಡುವೆ ಆರೋಪ ಪ್ರತ್ಯಾರೋಪಗಳು ನಡೆದವು. ಸ್ಥಳದಲ್ಲಿ ಜಮಾಯಿಸಿದ್ದ ಕಾರ್ಯಕರ್ತರನ್ನು ಪೊಲೀಸರು ಲಾಠಿ ಬೀಸಿ ಚದುರಿಸಿದರು.

ಆರ್‌ಟಿಐ ಕಾರ್ಯಕರ್ತ ಪದ್ಮನಾಭ ಮಯ್ಯ ಪುಂಜಾಲಕಟ್ಟೆ ಸರ್ಕಾರಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾದರೆ, ಕಾಂಗ್ರೆಸ್ ಕಾರ್ಯಕರ್ತರಾದ ಸದಾನಂದ ಶೆಟ್ಟಿ, ಬಿ.ಆರ್.ಅಂಚನ್ ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದಾರೆ.

ಪುಂಜಾಲಕಟ್ಟೆ ಪೋಲೀಸರು ಆಸ್ಪತ್ರೆಯಲ್ಲಿ ದಾಖಲಾದವರ ಹೇಳಿಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ. ಸುದ್ದಿ ತಿಳಿದು ಡಿ.ವೈ.ಎಸ್.ಪಿ.ವೆಲೆಂಟೈನ್ ಡಿ.ಸೋಜ, ಬೆಳ್ತಂಗಡಿ ವೃತ್ತ ನಿರೀಕ್ಷಕ ಶಿವಕುಮಾರ್ ಸ್ಥಳಕ್ಕಾಗಮಿಸಿ ಕಾವಳಮೂಡೂರು ಸೊಸೈಟಿ ಅಧ್ಯಕ್ಷ ಪದ್ಮಶೇಖರ್ ಜೈನ್, ಜಿಲ್ಲಾ ಬಿಜೆಪಿ ಯುವಮೋರ್ಚಾ ಕಾರ್ಯದರ್ಶಿ ಸುದರ್ಶನ ಬಜ ಅವರಿಂದ ಮಾಹಿತಿ ಪಡೆದುಕೊಂಡರು.

Leave a Reply

Ad Widget >>^
Ad Widget
error: Content is protected !!
Scroll to Top
%d bloggers like this: