ಕೊರೊನಾದಿಂದ ಮೃತಪಟ್ಟ ರೈತರ 1 ಲಕ್ಷ ರೂ ಸಾಲ ಮನ್ನಾ – ಸಚಿವ ಎಸ್ ಟಿ ಸೋಮಶೇಖರ್
ಮಂಗಳೂರು: ಕೋವಿಡ್ ಸೋಂಕಿನಿಂದಾಗಿ ಮೃತಪಟ್ಟ ರೈತರ ಸಾಲದಲ್ಲಿ 1 ಲಕ್ಷ ರೂ ವನ್ನು ಮನ್ನಾ ಮಾಡಲಾಗುತ್ತದೆ ಎಂದು ಸಚಿವ ಎಸ್ ಟಿ ಸೋಮಶೇಖರ್ ಹೇಳಿದ್ದಾರೆ.
ಮಂಗಳೂರಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ‘ಕೊವಿಡ್ನಿಂದ ಮೃತಪಟ್ಟ ರೈತರ ಸಾಲಮನ್ನಾಗೆ ಕರ್ನಾಟಕ ಸರ್ಕಾರ ತೀರ್ಮಾನ ಮಾಡಿದ್ದು, ಕೊರೊನಾದಿಂದ ಮೃತಪಟ್ಟ ರೈತರ ಸಾಲದ ಮೊತ್ತದಲ್ಲಿ 1 ಲಕ್ಷ ರೂಪಾಯಿ ಮನ್ನಾ ಮಾಡಲು ಸರ್ಕಾರ ನಿರ್ಧಾರ ಮಾಡಿದೆ ಎಂದು ಮಾಹಿತಿ ನೀಡಿದರು.
‘ಕೊವಿಡ್ನಿಂದ ರಾಜ್ಯದಲ್ಲಿ ಒಟ್ಟು10,400 ಸಾಲಗಾರ ರೈತರು ಮೃತಪಟ್ಟಿದ್ದಾರೆ. ಇವರ ಸಾಲದ ಮೊತ್ತದಲ್ಲಿ ತಲಾ 1 ಲಕ್ಷ ರೂಪಾಯಿ ಮನ್ನಾ ಮಾಡಲಾಗುವುದು. ಇದರಿಂದಾಗಿ ಸರ್ಕಾರಕ್ಕೆ 81 ಕೋಟಿ ರೂಪಾಯಿ ಹೊರೆಯಾಗಲಿದೆ. ಅಪೆಕ್ಸ್, ಡಿಸಿಸಿ ಬ್ಯಾಂಕ್ & ಪ್ಯಾಕ್ಸ್ ಗಳಲ್ಲಿ ಸಾಲ ಪಡೆದಿದ್ದ ಕೊರೋನಾದಿಂದ ಮೃತಪಟ್ಟಿರುವ 10187 ರೈತರ 79.47 ಕೋಟಿ ರೂಪಾಯಿ ಸಾಲ ಮನ್ನಾ ಮಾಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಚಿಂತನೆ ನಡೆಸಿದ್ದು, ಇನ್ನು ಮೂರ್ನಾಲ್ಕು ದಿನಗಳಲ್ಲಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.