ಸವಣೂರು : ಕೋಮು ಪ್ರಚೋದನೆ ಪೋಸ್ಟ್, ಆರೋಪಿ ಬಂಧನ

ಸವಣೂರು: ಕಡಬ ತಾಲೂಕಿನ ಸವಣೂರು ಗ್ರಾಮದ ಯುವಕನೋರ್ವ ವಾಟ್ಸಾಪ್ ಸ್ಟೇಟಸ್ ನಲ್ಲಿ ಕೋಮು ಪ್ರಚೋದನಕಾರಿ ಹಾಕಿದ್ದು ಈ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ದೂರು ದಾಖಲಾಗಿದೆ.

ಸವಣೂರಿನ ನಿಝಾರ್ ಎಂಬ ಯುವಕ ತನ್ನ ವಾಟ್ಸಾಪ್ ಸ್ಟೇಟಸ್ ನಲ್ಲಿ ಕೋಮು ಪ್ರಚೋದನಕಾರಿ ಬರಹವನ್ನು ಹಾಕಿದ್ದು ಈ ಬಗ್ಗೆ ಸವಣೂರು ಹಿಂದೂ ಜಾಗರಣ ವೇದಿಕೆ ನೀಡಿದ ದೂರಿನಂತೆ ಬೆಳ್ಳಾರೆ ಪೊಲೀಸರು ಆರೋಪಿಯನ್ನು ಬಂಧಿಸಿ, ಕಡಬ ದಂಡಾಧಿಕಾರಿಯವರ ಮುಂದೆ ಹಾಜರುಪಡಿಸಿದ್ದಾರೆ.

ಬಳಿಕ ಬಾಂಡ್ ಮುಚ್ಚಳಿಕೆ ಮುಖಾಂತರ ದಂಡಾಧಿಕಾರಿಯವರು ಬಿಡುಗಡೆಗೊಳಿಸಿರುವುದಾಗಿ ತಿಳಿದು ಬಂದಿದೆ.

Ad Widget / / Ad Widget

Leave a Reply

error: Content is protected !!
Scroll to Top
%d bloggers like this: