ಎಸ್ಎಸ್ಎಲ್ ಸಿ ಪರೀಕ್ಷಾ ಪ್ರವೇಶ ಪತ್ರ ತರಲು ಹೋದ ವಿದ್ಯಾರ್ಥಿನಿಗೆ ಹೃದಯಾಘಾತ, ಸ್ಥಳದಲ್ಲೇ ಸಾವು

ಎಸ್ಎಸ್ಎಲ್ ಸಿ ಪರೀಕ್ಷಾ ತಯಾರಿಯಲ್ಲಿದ್ದ ವಿದ್ಯಾರ್ಥಿನಿ, ಪರೀಕ್ಷಾ ಪ್ರವೇಶ ಪತ್ರ ತರಲು ಹೋದ ಸಂದರ್ಭದಲ್ಲಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಯಾದಗಿರಿಯಲ್ಲಿ ನಡೆದಿದೆ.

 

ಯಾದಗಿರಿ ಜಿಲ್ಲೆ ಗುರುಮಠಕಲ್ ನ ಫಾತಿಮಾ ಎಂಬುವವರು ಸರಕಾರಿ ಉರ್ದು ಶಾಲೆಯ ವಿದ್ಯಾರ್ಥಿನಿಯಾಗಿದ್ದು, ಎಸೆಸೆಲ್ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಶಾಲೆಗೆ ಹಾಲ್ ಟಿಕೆಟ್ ತರಲು ತೆರಳಿದ್ದಳು.

ಹೀಗೆ ಶಾಲೆಯಿಂದ ಹಾಲ್ ಟಿಕೆಟ್ ಪಡೆದು, ಮನೆಗೆ ಹಿಂತಿರುಗಲು ಬಸ್ ನಿಲ್ದಾಣದಲ್ಲಿ ಕುಳಿತಿದ್ದಾಗ, ಆಕೆಗೆ ಹೃದಯಾಘಾತವಾಗಿದೆ. ತಕ್ಷಣ ಆಸ್ಪತ್ರೆಗೆ ದಾಖಲಿಸಿತಾದರೂ, ಅದಾಗಲೇ ಆಕೆ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

Leave A Reply

Your email address will not be published.