ಬೆಳ್ತಂಗಡಿ, ಧರ್ಮಸ್ಥಳ, ಸುಬ್ರಹ್ಮಣ್ಯ ಮತ್ತು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ಹೊಸ ಸಬ್ ಇನ್ಸ್ಪೆಕ್ಟರ್ ಗಳ ನೇಮಕ

Share the Article

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಪವನ್ ನಾಯಕ್ ಅವರು ವರ್ಗಾವಣೆ ಗೊಂಡ ಬಳಿಕ ತೆರವಾಗಿದ್ದ ಸ್ಥಾನ ಇದೀಗ ಭರ್ತಿಗೊಂಡಿದೆ.
ವೇಣೂರು ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ ತರಬೇತಿಯಲ್ಲಿದ್ದ (ಪ್ರೊಬೆಷನರಿ) ಸಬ್ ಇನ್ಸ್‌ಪೆಕ್ಟರ್ ಕೃಷ್ಣಕಾಂತ್ ಅಯ್ಯಪ್ಪ ಪಾಟೀಲ್ ಅವರನ್ನು ಧರ್ಮಸ್ಥಳ ಠಾಣೆಗೆ ನಿಯೋಜಿಸಲಾಗಿದೆ.

ಬೆಳ್ತಂಗಡಿ ಠಾಣೆಯಲ್ಲಿ ಪ್ರೊಬೆಷನರಿ ಸಬ್ ಇನ್ಸ್‌ಪೆಕ್ಟರ್ ಆಗಿ ತರಬೇತಿ ಪೂರ್ತಿಗೊಳಿಸಿದ ಸಂದೀಪ್ ಕುಮಾರ್ ಶೆಟ್ಟಿ ಅವರನ್ನು ಬೆಳ್ತಂಗಡಿ ಠಾಣೆಗೇ ನೂತನ ಎಸ್.ಐ ಆಗಿ ನೇಮಕ ಆಗುತ್ತಿದ್ದಾರೆ.

ಧರ್ಮಸ್ಥಳ ಠಾಣೆಯಲ್ಲಿ‌ ಖಾಲಿಯಾಗಿದ್ದ ಸಬ್ ಇನ್ಸ್‌ಪೆಕ್ಟರ್ ಸ್ಥಾನಕ್ಕೆ ಮತ್ತು ಬೆಳ್ತಂಗಡಿ ಠಾಣೆಗೆ ಹೆಚ್ಚುವರಿಯಾಗಿ ಇನ್ನೊಬ್ಬರು ಸಬ್ ಇನ್ಸ್‌ಪೆಕ್ಟರ್ ಅವರನ್ನು ನೇಮಿಸಿ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ. ಅವರು ಜು.15 ರಂದು ಆದೇಶ ಹೊರಡಿಸಿದ್ದಾರೆ.

ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಠಾಣಾ ಎಸ್ ಐ ಎನ್.ಕೆ ಓಮನ ಅವರನ್ನು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ವರ್ಗಾವಣೆಗೊಳಿಸಿ ಸುಬ್ರಹ್ಮಣ್ಯಕ್ಕೆ ನೂತನ ಎಸ್.ಐ ಅವರನ್ನು ನೇಮಿಸಿ ಪಶ್ಚಿಮ ವಲಯದ ಪೊಲೀಸ್ ಮಹಾನಿರೀಕ್ಷಕರು ಆದೇಶ ಹೊರಡಿಸಿದ್ದಾರೆ.

ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಕಳೆದ ಕೆಲವು ಸಮಯಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಎಸ್.ಐ ಜಂಬೂರಾಜ್ ಮಹಾಜನ್ ಅವರಿಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿ ಮಾಡಲಾಗಿದೆ.

2020 ರ ಫೆಬ್ರವರಿ ತಿಂಗಳಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಗೆ ತನ್ನ ಪ್ರಥಮ ನೇಮಕಾತಿಯಾಗಿ ಕರ್ತವ್ಯಕ್ಕೆ ಹಾಜರಾಗಿದ್ದ ಎಸ್.ಐ ಜಂಬೂರಾಜ್ ಮಹಾಜನ್ ಅವರು ಒಂದೂವರೆ ವರ್ಷದ ಕರ್ತವ್ಯದ ಬಳಿಕ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ವರ್ಗಾವಣೆಗೊಳ್ಳುತ್ತಿದ್ದಾರೆ.

Leave A Reply