ಬಿಎಸ್‌ವೈ-ಮೋದಿ ಭೇಟಿ | ಭೇಟಿಯಲ್ಲಿ ಈ ವಿಚಾರಗಳನ್ನು ಪ್ರಸ್ತಾಪಿಸಿದರು

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಜು.16ರಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ರಾಜ್ಯದ ಕೆಲ ಯೋಜನೆಗಳ ವಿಷಯದಲ್ಲಿ ಕೇಂದ್ರ ಸರ್ಕಾರದ ನೆರವು ಒದಗಿಸುವಂತೆ ಮನವಿ ಮಾಡಿದರು.

ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಬೇಕು, ಬೆಂಗಳೂರು ಪೆರಿಫೆರಲ್ ರಿಂಗ್ ರೋಡ್ ನಿರ್ಮಾಣಕ್ಕೆ 6 ಸಾವಿರ ಕೋಟಿ ಅನುದಾನ ನೀಡುವಂತೆ ಪ್ರಧಾನಿಯವರಿಗೆ ಮುಖ್ಯಮಂತ್ರಿಗಳು ಮನವಿ ಮಾಡಿದರು.

ಈ ಸಂದರ್ಭ ಮೇಕೆದಾಟು ಯೋಜನೆ, ಬೆಂಗಳೂರಿನಲ್ಲಿ ಯುಎಸ್ ಕಾನ್ಸುಲೇಟ್ ಸ್ಥಾಪನೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಸಿದರು. ಈ ವೇಳೆ ಮುಖ್ಯಮಂತ್ರಿಯವರ ಕಾರ್ಯದರ್ಶಿ ಗಿರೀಶ್ ಹೊಸೂರ್ ಉಪಸ್ಥಿತರಿದ್ದರು.

Leave A Reply

Your email address will not be published.