ಉತ್ತರಕನ್ನಡ ಜಿಲ್ಲೆಯ ಪ್ರಥಮ ಮಹಿಳಾ ಪೊಲೀಸ್ ಅಧಿಕಾರಿ ಧನ್ಯಾ ನೀಲಕಂಠ ನಾಯಕ ಮಂಗಳೂರು ಡಿವೈಎಸ್ಪಿಯಾಗಿ ಜು.19ರಂದು ಅಧಿಕಾರ ಸ್ವೀಕಾರ

ಉತ್ತರಕನ್ನಡ ಜಿಲ್ಲೆಯ ಪ್ರಪ್ರಥಮ ಮಹಿಳಾ ಪೊಲೀಸ್ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದ ಅಂಕೋಲಾ ತಾಲೂಕಿನ ವಾಸರ ಕುದ್ರಿಗೆಯ ಧನ್ಯಾ ನೀಲಕಂಠ ನಾಯಕ ಅವರು ಡಿವೈಎಸ್ಪಿ ಹುದ್ದೆಗೆ ನೇಮಕಗೊಂಡಿದ್ದಾರೆ.

 

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಜುಲೈ 19 ರಂದು ಅಧಿಕಾರ ಸ್ವೀಕರಿಸಲಿದ್ದಾರೆ.
ಧನ್ಯಾ ನಾಯಕ ಅವರು, 2019-20ರಲ್ಲಿ ನಡೆದ ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಡಿವೈಎಸ್ಪಿ ಹುದ್ದೆಗೆ ಆಯ್ಕೆಯಾಗಿದ್ದು, ಕರ್ನಾಟಕ ಪೊಲೀಸ್ ಅಕಾಡೆಮಿಯಲ್ಲಿ ತರಬೇತಿ ಪಡೆದ 35ನೇ ತಂಡದ ಪ್ರಶಿಕ್ಷಣಾರ್ಥಿಗಳಲ್ಲಿ ಸರ್ವೋತ್ತಮ ಮಹಿಳಾ ಪ್ರಶಿಕ್ಷಣಾರ್ಥಿ ಎನ್ನುವ ಗೌರವಕ್ಕೆ ಪಾತ್ರರಾದವರು.

Leave A Reply

Your email address will not be published.