ಜು.26 ರ ಬಳಿಕ ರಾಜ್ಯ ರಾಜಕಾರಣದಲ್ಲಿ ಆಗಲಿದೆಯಾ ಮಹತ್ತರ ಬದಲಾವಣೆ ? ಏನಾಗಲಿದೆ ಮುಂದೆ..
ಮುಖ್ಯ ಮಂತ್ರಿ ಯಡಿಯೂರಪ್ಪ ಅವರ ದಿಲ್ಲಿ ಭೇಟಿಯ ಬಳಿಕ ರಾಜ್ಯ ಬಿಜೆಪಿಯಲ್ಲಿ ತೆರೆಮರೆಯಲ್ಲಿಕಸರತ್ತು ಆರಂಭವಾಗಿದೆ. ಜು. 26ರ ಅನಂತರದ ರಾಜಕೀಯ ಕುರಿತ ಲೆಕ್ಕಾಚಾರ ನಡೆಯುತ್ತಿದೆ.
ಯಡಿಯೂರಪ್ಪ ಅವರು ಪ್ರಧಾನಿ ಮೋದಿ,ಅಮಿತ್ ಶಾ,ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿದ ಬಳಿಕ “ರಾಜೀನಾಮೆ ನೀಡುವುದಿಲ್ಲ, ಪಕ್ಷದ ನಾಯಕರು ಸೂಚಿಸಿಲ್ಲ,ಅಭಿವೃದ್ಧಿ ವಿಚಾರಗಳ ಕುರಿತು ಮಾತುಕತೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ಆದರೆ ಬಿಜೆಪಿ ವಲಯದಲ್ಲಿ ಮಾತ್ರ ಜು. 26ರ ಭಾರೀ ಸದ್ದು ಮಾಡುತ್ತಿದೆ. ಜು.26 ರ ಬಳಿಕ ಕೆಲ ರಾಜ್ಯಗಳಿಗೆ ರಾಜ್ಯಪಾಲರನ್ನು ನೇಮಕ ಮಾಡಲಾಗುತ್ತದೆ ಇದೆ ಎನ್ನಲಾಗಿದೆ ,ಆ ಸಮಯದಲ್ಲಿ ಏನೆಲ್ಲ ಬೆಳವಣಿಗೆ ಆಗಲಿವೆ ಎನ್ನುವುದು ಕುತೂಹಲಕಾರಿಯಾಗಿದೆ.ಆದರೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಮ್ಮ ಕರ್ತವ್ಯದಲ್ಲಿ ನಿರತರಾಗಿದ್ದಾರೆ.
ಯಡಿಯೂರಪ್ಪ ಅವರು ಹುದ್ದೆಗೆ ರಾಜೀ ನಾಮೆ ಸಲ್ಲಿಸಿದರೆ, ಪರ್ಯಾಯ ನಾಯಕತ್ವದ ಬಗ್ಗೆಯೂ ಬಿರುಸಿನ ಚರ್ಚೆಗಳು ನಡೆಯುತ್ತಿವೆ. ಯಡಿಯೂರಪ್ಪ ಅವರನ್ನು ಪಕ್ಕದ ರಾಜ್ಯದ ರಾಜ್ಯಪಾಲರನ್ನಾಗಿ ಮಾಡಿದರೆ.ಮುಖ್ಯ ಮಂತ್ರಿ ಹುದ್ದೆಗೆ ಪ್ರಹ್ಲಾದ್ ಜೋಶಿ, ಲಕ್ಷ್ಮಣ ಸವದಿ ಮತ್ತು ಮುರುಗೇಶ್ ನಿರಾಣಿ ,ಬಸವರಾಜ ಬೊಮ್ಮಾಯಿ ಅವರಲ್ಲಿ ಒಬ್ಬರಿಗೆ ಹುದ್ದೆ ನೀಡುವ ಸಾಧ್ಯತೆ ಇದೆ.
ಈ ನಡುವೆ ರವಿವಾರ ರಾತ್ರಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಅವರದ್ದು ಎನ್ನಲಾದ ಆಡಿಯೋ ಒಂದು ವೈರಲ್ ಆಗಿದೆ. ತಮ್ಮ ಆಪ್ತರೊಂದಿಗೆ ಅವರು ತುಳುವಿನಲ್ಲಿ ಮಾತನಾಡಿದ್ದಾರೆ ಎನ್ನಲಾದ ಈ ಆಡಿಯೋದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಸುಳಿವು ನೀಡಿದ್ದಾರೆ. ಮೂವರಲ್ಲಿ ಯಾರು ಬೇಕಾದರೂ ಸಿಎಂ ಆಗಬಹುದು. ಶೆಟ್ಟರ್ ಮತ್ತು ಈಶ್ವರಪ್ಪ ತಂಡವನ್ನು ತೆಗೆದು ಹೊಸ ತಂಡ ಕಟ್ಟಲಾಗುವುದು ಎಂದು ಈ ಆಡಿಯೋದಲ್ಲಿ ಕೇಳಿಬಂದಿದೆ. ಆದರೆ ಆಡಿಯೋದ ಖಚಿತತೆ ಇನ್ನೂ ಸ್ಪಷ್ಟವಾಗಿಲ್ಲ.ಇದು ನಕಲಿ ಎಂದು ನಳೀನ್ ಕುಮಾರ್ ತಿಳಿಸಿದ್ದಾರೆ.
ತನ್ನ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕೆಲಸಗಳ ಕುರಿತು ರವಿವಾರದವರೆಗೆ ಅಧಿಕಾರಿಗಳ ಜತೆ ಚರ್ಚೆ ಹಾಗೂ ಕಾರ್ಯಕರ್ತರಿಂದ ,ಜನರಿಂದ ಅಹವಾಲು ಸ್ವೀಕರಿಸಿದರು.ಸೋಮವಾರ ಬೆಳಿಗ್ಗೆ ದೆಹಲಿಗೆ ಪ್ರಯಾಣ ಬೆಳೆಸಲಿರುವ ನಳಿನ್ ಕುಮಾರ್ ಕಟೀಲ್ ಕೇಂದ್ರ ಸಚಿವರ ಜತೆ ಅಭಿವೃದ್ಧಿ ಕೆಲಸಗಳ ಕುರಿತು ಚರ್ಚಿಸಲಿದ್ದಾರೆ ಎನ್ನಲಾಗಿದೆ.