ಬಿಜೆಪಿಗೆ ಬಿಎಸ್‌ವೈ ಆತ್ಮ,ಈಶ್ವರಪ್ಪ ,ಶೆಟ್ಟರ್ ಎರಡು ಕಣ್ಣುಗಳಿದ್ದಂತೆ- ನಳಿನ್ ಕುಮಾರ್ ಕಟೀಲ್

ವೈರಲ್ ಆಗಿರುವ ಆಡಿಯೋಗೂ ನನಗೂ ಯಾವುದೇ ಸಂಬಂಧವಿಲ್ಲ. ಮುಖ್ಯಮಂತ್ರಿಗಳಿಗೆ ಈ ಕುರಿತು ಪತ್ರ ಬರೆಯುತ್ತೇನೆ.ಇದರ ತನಿಖೆಯಾಗಬೇಕು.ನಂತರ ಸತ್ಯಾಸತ್ಯತೆ ಹೊರ ಬರಲಿದೆ ಎಂದು ಬಿ.ಜೆ.ಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.

 

ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋ ರವಿವಾದ ವೈರಲ್ ಆಗಿತ್ತು.

ನಾಯಕತ್ವ ಬದಲಾವಣೆ ಕುರಿತು ನಮ್ಮಲ್ಲಿ ಯಾವುದೇ ಚರ್ಚೆಗಳಿಲ್ಲ. ನಮ್ಮ ಪಕ್ಷಕ್ಕೆ ಯಡಿಯೂರಪ್ಪ ಆತ್ಮವಿದ್ದಂತೆ. ಯಡಿಯೂರಪ್ಪ ನಮ್ಮ ಸರ್ವ ಸಮ್ಮತದ ನಾಯಕ. ಈಶ್ವರಪ್ಪ, ಜಗದೀಶ್ ಶೆಟ್ಟರ್ ಪಾರ್ಟಿಯ ಎರಡು ಕಣ್ಣುಗಳು ಇದ್ದಂತೆ ಎಂದರು.

ತನಿಖೆಯಾಗದೇ ಯಾರ ಬಗ್ಗೆಯೂ ಸಂಶಯ ವ್ಯಕ್ತಪಡಿಸಲ್ಲ. ತನಿಖೆ ಮೂಲಕ ಸತ್ಯ ಹೊರಬರಲಿ. ಎಲ್ಲದಕ್ಕೂ ತನಿಖೆಯ ಬಳಿಕ ಉತ್ತರ ನೀಡುತ್ತೇನೆ. ನ್ಯಾಯಾಲಯದ ಮೊರೆ ಹೋಗುವ ಬಗ್ಗೆಯೂ ಚಿಂತನೆ ನಡೆಸಿದ್ದೇನೆ ಎಂದು ಮಂಗಳೂರಿನಲ್ಲಿ ನಳಿನ್ ಕುಮಾರ್ ಕಟೀಲ್ ಹೇಳಿದರು.

Leave A Reply

Your email address will not be published.