ಮಂಗಳೂರು | ಎಸ್ಎಸ್ಎಲ್ ಸಿ ಪರೀಕ್ಷಾ ಕೇಂದ್ರದಲ್ಲಿ ಅಗ್ನಿ ಅವಘಡ !

Share the Article

ಮಂಗಳೂರು: ನಗರದ ಉಳ್ಳಾಲ ಬಳಿಯ ಎಸೆಸೆಲ್ಸಿ ಪರೀಕ್ಷಾ ಕೇಂದ್ರದಲ್ಲಿ ಇಂದು ಅಗ್ನಿ ಅವಘಡ ಸಂಭವಿಸಿದ್ದು, ಶಿಕ್ಷಕರ ಸಮಯ ಪ್ರಜ್ಞೆಯಿಂದ ಮುಂದಾಗಲಿದ್ದ ಭಾರೀ ಅನಾಹುತ ತಪ್ಪಿದಂತಾಗಿದೆ.

ಉಳ್ಳಾಲ ಸಮೀಪದ ಬಬ್ಬುಕಟ್ಟೆಯಲ್ಲಿನ ಖಾಸಗಿ ಶಾಲೆಯೊಂದರಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಲ್ಯಾಬ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದೇ ಲ್ಯಾಬ್ ಸಮೀಪವೇ ಇದ್ದಂತಹ ಎಸೆಸೆಲ್ಸಿ ಪರೀಕ್ಷಾ ಕೊಠಡಿಗೂ, ಪರೀಕ್ಷೆ ಆರಂಭವಾದ ಅರ್ಧ ಗಂಟೆಯಲ್ಲಿ ದಟ್ಟವಾದ ಹೊಗೆ ಅವರಿಸಿಕೊಂಡಿದೆ.

ಕೂಡಲೇ ಕೊಠಡಿಯಲ್ಲಿದ್ದ ಶಿಕ್ಷಕರು ವಿದ್ಯಾರ್ಥಿಗಳನ್ನು ಪರೀಕ್ಷೆಗಾಗಿ ಬೇರೊಂದು ಕಟ್ಟಡದಲ್ಲಿ ವ್ಯವಸ್ಥೆ ಮಾಡಿದ್ದಾರೆ. ಈ ಮೂಲಕ ಮುಂದಾಗಲಿದ್ದ ಭಾರೀ ಅನಾಹುತವನ್ನು ತಪ್ಪಿಸಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳು ನಿರಾಂತಕವಾಗಿ ಪರೀಕ್ಷೆ ಬರೆಯುವುದನ್ನು ಮುಂದುವರಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದಂತಹ ಉಳ್ಳಾಲದ ಅಗ್ನಿಶಾಮಕದಳದ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಸಫಲರಾಗಿದ್ದಾರೆ.

Leave A Reply