ಪಡುಬಿದ್ರಿ | ಕಾರು ಚರಂಡಿಗೆ ಬಿದ್ದು ವ್ಯಕ್ತಿ ಸ್ಥಳದಲ್ಲೇ ಸಾವು

ಪಡುಬಿದ್ರಿ ಉಚ್ಚಿಲ – ಮುದರಂಗಡಿ ರಸ್ತೆಯ ಎಲ್ಲೂರು ಬಳಿಯ ಪಣಿಯೂರು ಪೆಜತ್ತಕಟ್ಟೆ ಬಳಿ ಕಾರು ಚರಂಡಿಗೆ ಬಿದ್ದು ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಕಾಪು ಕೊಪ್ಪಲಂಗಡಿ ನಿವಾಸಿ ರವೀಂದ್ರ ಪೂಜಾರಿ (38) ಎಂಬುವವರು ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.

ಉದ್ಯಾವರ ಬಲಾಯಿಪಾದೆಯಲ್ಲಿ ಗ್ಯಾರೇಜ್ ನಡೆಸುತ್ತಿದ್ದ ರವೀಂದ್ರ ಅವರು ರವಿವಾರ ರಾತ್ರಿ ಎಲ್ಲೂರಿಗೆ ತೆರಳಿದ್ದು, ಅಲ್ಲಿಂದ ವಾಪಸಾಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

Ad Widget
Ad Widget

Ad Widget

Ad Widget

ಕಾರು ರಸ್ತೆ ಬದಿಯ ಚರಂಡಿ ಮತ್ತು ಮಣ್ಣಿನ ದಿಬ್ಬಕ್ಕೆ ಢಿಕ್ಕಿ ಹೊಡೆದಿದ್ದು, ರವೀಂದ್ರ ಅವರು ಕಾರಿನಿಂದ ಹೊರಕ್ಕೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದರು. ಈ ವೇಳೆ ಅಲ್ಲೇ ರಕ್ತಸ್ರಾವ ಉಂಟಾಗಿ ಸ್ಥಳದಲ್ಲೇ ಮೃತಪಟ್ಟಿರುವ ಸಾಧ್ಯತೆಯಿದೆ.

ಅಪಘಾತದ ಸಂದರ್ಭ ಭಾರೀ ಮಳೆ ಸುರಿಯುತ್ತಿದ್ದು, ಅಪಘಾತಕ್ಕೆ ಮಳೆಯೂ ಕಾರಣವಾಗಿರಬಹುದೆಂಬ ಸಂಶಯ ವ್ಯಕ್ತವಾಗಿದೆ.

ಇಂದು ಮುಂಜಾನೆ ಪೇಪರ್ ವಿತರಕರು ಇದನ್ನು ಗಮನಿಸಿ, ಸ್ಥಳೀಯರಿಗೆ ತಿಳಿಸಿ, ಬಳಿಕ ಪಡುಬಿದ್ರಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಪಡುಬಿದ್ರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Leave a Reply

error: Content is protected !!
Scroll to Top
%d bloggers like this: