ದ್ವಿಚಕ್ರ ವಾಹನದಲ್ಲಿ ಹೋಗುತ್ತಿರುವಾಗ ಹಾರಿಕೊಂಡು ಬಂದು ಡಿಕ್ಕಿಯಾದ ನವಿಲು | ನವಿಲು, ವಾಹನ ಸವಾರ ಸಾವು

ಉಡುಪಿ : ತೆಂಕ ಎರ್ಮಾಳು ಗರೋಡಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನವಿಲೊಂದಕ್ಕೆ ಡಿಕ್ಕಿಯಾಗಿ ತನ್ನ ವಾಹನದ ನಿಯಂತ್ರಣ ಕಳೆದುಕೊಂಡ ದ್ವಿಚಕ್ರ ವಾಹನ ಸವಾರ ರಸ್ತೆಯಂಚಿನ ಕಲ್ಲೊಂದಕ್ಕೆ ಡಿಕ್ಕಿಯಾಗಿ ತಲೆಗೆ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ನಡೆದಿದೆ.

 

ಮೃತ ಯುವಕನನ್ನು ಬೆಳಪು ನಿವಾಸಿ ಪಡುಬಿದ್ರಿ ಮೊಬೈಲ್ ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದ. ಅಬ್ದುಲ್ (25) ಎಂದು ಗುರುತಿಸಲಾಗಿದೆ.

ಈತ ಪಡುಬಿದ್ರಿ ಕಡೆಯಿಂದ ತನ್ನ ಸ್ಕೂಟರಲ್ಲಿ ಬರುತ್ತಿದ್ದಾಗ ನವಿಲೊಂದು ಹಾರಿಕೊಂಡು ಬಂದು ಡಿಕ್ಕಿಯಾಗಿದೆ. ಅಪಘಾತದಲ್ಲಿ ನವಿಲು ಸ್ಥಳದಲ್ಲೇ ಮೃತಪಟ್ಟರೆ, ಗಾಯಾಳು ಅಬ್ದುಲ್ ಅವರನ್ನು ಸ್ಥಳದಲ್ಲಿ ಸೇರಿದ ಸಾರ್ವಜನಿಕರು ಆಂಬುಲೆನ್ಸ್‌ಗೆ ಕರೆ ಮಾಡಿ, ಅರ್ಧ ಗಂಟೆಗೂ ಅಧಿಕ ಹೊತ್ತು ಕಾದಿದ್ದರಾದರೂ ಆಂಬುಲೆನ್ಸ್ ಬಾರದಿದ್ದರಿಂದ, ಸ್ಥಳೀಯ ಕಾರ್ತಿಕ್ ಎಂಬ ಯುವಕ ತನ್ನ ಖಾಸಗಿ ವಾಹನದಲ್ಲಿ ಸಾಗಿಸಿದ್ದರು‌.

ಆ ವೇಳೆಗಾಗಲೇ ಅಬ್ದುಲ್ ಯುವಕ ಮೃತ ಪಟ್ಟಿದ್ದರು ಎನ್ನಲಾಗಿದೆ.

Leave A Reply

Your email address will not be published.