ನಾಳೆ ಸಂಜೆ 4.30 ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ | ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿಕೆ

ನಾಳೆ ಸಂಜೆ 4.30ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುರೇಶ್ ಕುಮಾರ್, ನಾಳೆ ಸಂಜೆ 4.30 ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಇಲಾಖೆಯ ವೆಬ್ ಸೈಟ್ ನಲ್ಲಿ ಪ್ರಕಟವಾಗಲಿದೆ ಎಂದು ಹೇಳಿದ್ದಾರೆ.

ಗ್ರೇಡ್ ಬದಲಿಗೆ ಅಂಕಗಳನ್ನೇ ನೀಡಲು ಪಿಯುಸಿ ಬೋರ್ಡ್ ನಿರ್ಧಾರ ಮಾಡಿದೆ. ಹೀಗಾಗಿ ಅಂಕಗಳ ಮಾದರಿಯಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂಬುದಾಗಿ ತಿಳಿಸಿದ್ದಾರೆ.

ವಿದ್ಯಾರ್ಥಿಗಳು ಫಲಿತಾಂಶ ನೋಡಲು ನೋಂದಣಿ
ಸಂಖ್ಯೆ ಕಡ್ಡಾಯವಾಗಿ ಪಡೆದುಕೊಳ್ಳಬೇಕು. ಇಲಾಖೆ ವೆಬ್ ಸೈಟ್ ನಲ್ಲಿ ‘Know my registration number’ ಎಂಬ ಲಿಂಕ್ ಮೂಲಕ ಪ್ರತಿ ವಿದ್ಯಾರ್ಥಿಗಳು ನೋಂದಣಿ ಸಂಖ್ಯೆ ಪಡೆಯಬಹುದಾಗಿದೆ ಎಂದು ಹೇಳಿದರು.

ಕೊರೊನಾ ಹಿನ್ನೆಲೆಯಲ್ಲಿ ಪರೀಕ್ಷೆ ರದ್ದು ಮಾಡಿ ಎಲ್ಲಾ ವಿದ್ಯಾರ್ಥಿಗಳನ್ನು ಸರ್ಕಾರ ಪಾಸ್ ಮಾಡಿತ್ತು. ಆದರೆ ವಿದ್ಯಾರ್ಥಿಗಳಿಗೆ ಅಂಕಗಳನ್ನು ನೀಡಲು ವಿದ್ಯಾರ್ಥಿಯು ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಪಡೆದ ಶೇ.45 ಅಂಕ ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಪಡೆದ ಶೇ.45 ಅಂಕ ಹಾಗೂ ಶೇ.10 ಇಂಟರ್ನಲ್ ಅಸೆಸೆಂಟ್ ಅಂಕಗಳ ಆಧಾರದಲ್ಲಿ ಈ ವರ್ಷ ಪಿಯುಸಿ ಬೋರ್ಡ್ ಫಲಿತಾಂಶ ಪ್ರಕಟ ಮಾಡಲಿದೆ ಎಂದರು.

Leave A Reply

Your email address will not be published.