ಅಶ್ಲೀಲ ವಿಡಿಯೋ ತಯಾರಿಕೆ ಮತ್ತು ಹಂಚಿಕೆ ಆರೋಪದಲ್ಲಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಆರೆಸ್ಟ್ | ಶಾಕಿಂಗ್ ನಲ್ಲಿದೆ ಶಿಲ್ಪಾ ಕುಟುಂಬ

ಮುಂಬೈ: ಅಶ್ಲೀಲ ಚಿತ್ರ ತಯಾರಿಸಿದ ಮತ್ತು ವಿತರಿಸಿದ ಪ್ರಕರಣದಲ್ಲಿ ಮುಂಬೈ ಪೊಲೀಸರು ನಟಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರ ಅವರನ್ನು ಬಂಧಿಸಿದ್ದಾರೆ.

ಉದ್ಯಮಿ ರಾಜ್ ಕುಂದ್ರ ಅವರನ್ನು ಪೋರ್ನ್ ಚಲನಚಿತ್ರಗಳನ್ನು ಸೃಷ್ಟಿಸಿ ಆಪ್ ಗಳ ಮೂಲಕ ಪ್ರಸಾರ ಮಾಡುತ್ತಿದ್ದ ಆರೋಪದ ಅಡಿ ಬಂಧಿಸಲಾಗಿದೆ ಎಂದು ಮುಂಬೈ ನ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಕ್ರೈಮ್ ಬ್ರಾಂಚ್ ನ ಅಧಿಕಾರಿಗಳು ಈ ಕಾರ್ಯಾಚರಣೆಯನ್ನು ನಡೆಸಿದ್ದು, ಕುಂದ್ರ ಅವರು ಪ್ರಮುಖ ಆರೋಪಿಯಾಗಿದ್ದಾರೆ.

“ಪೋರ್ನ್ ಸಿನಿಮಾಗಳನ್ನು ಸೃಷ್ಟಿಸಿ ಅದನ್ನು ಆಪ್ ಗಳ ಮೂಲಕ ಪ್ರಸಾರ ಮಾಡಲಾಗುತ್ತಿದೆ ಎಂದು 2021 ರ ಫೆಬ್ರವರಿ ತಿಂಗಳಲ್ಲಿ ಮುಂಬೈ ನ ಕ್ರೈಮ್ ಬ್ರಾಂಚ್ ಪೊಲೀಸರಿಗೆ ದೂರು ಬಂದಿತ್ತು. ಈ ಪ್ರಕರಣದಲ್ಲಿ ರಾಜ್ ಕುಂದ್ರಾ ಅವರು ಪ್ರಮುಖ ಆರೋಪಿ ಎಂಬುದಕ್ಕೆ ಸಾಕ್ಷ್ಯಗಳು ಲಭ್ಯವಾಗಿದ್ದು ಅವರನ್ನು ಬಂಧಿಸಿದ್ದೇವೆ ಎಂದು ಪೊಲೀಸ್ ಅಧಿಕಾರಿಗಳು ವಿವರಿಸಿದ್ದಾರೆ.

Ad Widget
Ad Widget

Ad Widget

Ad Widget

ಕೆಂಡ್ರಿಂಗ್​ ಹೆಸರಿನ ಇಂಗ್ಲೆಂಡ್​ ಮೂಲದ ಕಂಪನಿ ಮೇಲೆ ರಾಜ್​ 10 ಕೋಟಿ ಹೂಡಿಕೆ ಮಾಡಿದ್ದಾರೆ. ಈ ಪ್ರಕರಣದಲ್ಲಿ ಉಮೇಶ್ ಎಂಬಾತನನ್ನು ಬಂಧಿಸಲಾಗಿದೆ. ಕುಂದ್ರಾ ಹಾಗೂ ಉಮೇಶ್​ ನಡುವೆ ಒಪ್ಪಂದ ಇತ್ತು ಎನ್ನಲಾಗಿದೆ.

ನಟಿ ಶಿಲ್ಪಾ ಶೆಟ್ಟಿ ಹಾಗೂ ಉದ್ಯಮಿ ರಾಜ್​ಕುಂದ್ರಾ 2009ರಲ್ಲಿ ಮದುವೆ ಆದರು. ಇಬ್ಬರೂ ಸುಖ ಸಂಸಾರ ನಡೆಸುತ್ತಿದ್ದಾರೆ. ಹೀಗಿರುವಾಗಲೇ ಈ ಸುದ್ದಿ ಬರ ಸಿಡಿಲಿನಂತೆ ಬಂದಪ್ಪಳಿಸಿದ್ದು, ಅಭಿಮಾನಿಗಳು ಹಾಗೂ ಶಿಲ್ಪಾ ಶೆಟ್ಟಿ ಕುಟುಂಬಕ್ಕೆ ಇದು ಶಾಕ್​ ನೀಡಿದೆ.

Leave a Reply

error: Content is protected !!
Scroll to Top
%d bloggers like this: