PUC ಫಲಿತಾಂಶ 2021 | ಪ್ರಥಮ ಸ್ಥಾನದಲ್ಲಿ ದಕ್ಷಿಣಕನ್ನಡ, ಬೆಂಗಳೂರು ದ್ವಿತೀಯ | ಎಲ್ಲಾ ವಿದ್ಯಾರ್ಥಿಗಳು ಪಾಸ್ !!

ಬೆಂಗಳೂರು, ಜುಲೈ 20: ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟಗೊಂಡಿದೆ. ಎಸ್ ಎಸ್ ಎಲ್ ಸಿ, ಪ್ರಥಮ ಪಿಯುಸಿ ಅಂಕ ಕೂಡಿಸಿ ದ್ವಿತೀಯ ಪಿಯುಸಿ ಕೃಪಾಂಕ ಪರಿಗಣನೆ ಮಾಡಲಾಗಿದೆ.

ಬುದ್ಧಿವಂತರ ಜಿಲ್ಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 445 ವಿದ್ಯಾರ್ಥಿಗಳು 600ಕ್ಕೆ 600 ಅಂಕ ಪಡೆಯುವ ಮೂಲಕ ಪ್ರಥಮ ಸ್ಥಾನಗಳಿಸಿ ಬೀಗಿದೆ.

ಬೆಂಗಳೂರು ದಕ್ಷಿಣ 302 ವಿದ್ಯಾರ್ಥಿಗಳು 600ಕ್ಕೆ 600 ಅಂಕ ಪಡೆಯುವ ಮೂಲಕ ಎರಡನೇ ಸ್ಥಾನ, ಬೆಂಗಳೂರು ಉತ್ತರ 261 ವಿದ್ಯಾರ್ಥಿಗಳು 600ಕ್ಕೆ 600 ಅಂಕ ಪಡೆದು ಮೂರನೇ ಸ್ಥಾನ, ಉಡುಪಿಯಲ್ಲಿ 149 ವಿದ್ಯಾರ್ಥಿಗಳು 600ಕ್ಕೆ 600 ಅಂಕ ಪಡೆಯುವ ಮೂಲಕ ನಾಲ್ಕನೇ ಸ್ಥಾನ ಹಾಗೂ ಹಾಸನ ಜಿಲ್ಲೆಯಲ್ಲಿ 104 ವಿದ್ಯಾರ್ಥಿಗಳು 600ಕ್ಕೆ 600 ಅಂಕ ಪಡೆಯುವ ಮೂಲಕ ಐದನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಅದರಂತೆ ಒಟ್ಟು, 6,66,497 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು, ಅದರಲ್ಲಿ 3,35,138 ವಿದ್ಯಾರ್ಥಿಗಳು, ಹಾಗೂ 3,31,359 ವಿದ್ಯಾರ್ಥಿನಿಯರು ತೇರ್ಗಡೆ ಹೊಂದಿದ್ದಾರೆ.
ಅವರಲ್ಲಿ 1,95,650 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ನಲ್ಲಿ ತೇರ್ಗಡೆಯಾಗಿದ್ದಾರೆ. ಹತ್ತನೇ ತರಗತಿಯಲ್ಲಿ ವಿಷಯವಾರು ಪಡೆದಿದ್ದ ಅಂಕಗಳ ಶೇ.45ರಷ್ಟು ಅಂಕ ಗಳಿಕೆ, ಪ್ರಥಮ ಪಿಯುಸಿ ಪರೀಕ್ಷೆಯಲ್ಲಿ ಗಳಿಸಿರುವ ಅಂಕದಲ್ಲಿ ಶೇ.45ರಷ್ಟು ಅಂಕವನ್ನು ಪರಿಗಣನೆಗೆ ತೆಗೆದುಕೊಳ್ಳಲಾಗಿದ್ದು, ದ್ವಿತೀಯ ಪಿಯುಸಿಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗೆ ಶೇ.10ರಷ್ಟು ಅಂಕ ಜತೆಗೆ ಪ್ರಥಮ ಪಿಯುಸಿಯಲ್ಲಿ ಪಡೆದ ಅಂಕಗಳಿಗೆ ಶೇ.5ರಷ್ಟು ಫಲಿತಾಂಶ ನೀಡುತ್ತೇವೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

600ಕ್ಕೆ 600 ಅಂಕ ಪಡೆದ ವಿದ್ಯಾರ್ಥಿಗಳು: ದಕ್ಷಿಣ ಕನ್ನಡ ಜಿಲ್ಲೆ 445, ಬೆಂಗಳೂರು ದಕ್ಷಿಣ 302, ಬೆಂಗಳೂರು ಉತ್ತರ 261, ಉಡುಪಿ 149, ಹಾಸನ 104 ವಿದ್ಯಾರ್ಥಿಗಳು.

ಈ ವರ್ಷ ಪರೀಕ್ಷೆಗೆ 3, 35,138 ಬಾಲಕರು ಮತ್ತು 3,31,359 ಬಾಲಕಿಯರು ಸೇರಿದಂತೆ ಒಟ್ಟು 6, ಲಕ್ಷದ 66 ಸಾವಿರದ 497 ವಿದ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

ಡಿಸ್ಟಿಕ್ಷನ್ ಮತ್ತು ಮೊದಲ ದರ್ಜೆಯಲ್ಲಿ 1 ಲಕ್ಷದ 95 ಸಾವಿರದ 650 ವಿದ್ಯಾರ್ಥಿಗಳು ಪಾಸಾಗಿದ್ದರೆ, ಎರಡನೇ ದರ್ಜೆಯಲ್ಲಿ 1 ಲಕ್ಷದ 47 ಸಾವಿರದ 55 ಹಾಗೂ 68 ಸಾವಿರದ 721 ವಿದ್ಯಾರ್ಥಿಗಳು ಜಸ್ಟ್ ಪಾಸ್ ಆಗಿದ್ದಾರೆ.

Leave A Reply

Your email address will not be published.