ಎಸ್ ಎಸ್ ಎಲ್ ಸಿ ಫಲಿತಾಂಶ ದಿನಾಂಕ ಫಿಕ್ಸ್ | ಸಚಿವ ಸುರೇಶ್ ಕುಮಾರ್ ಮಾಹಿತಿ
ಇದೇ 19ರಂದು ನಡೆದ ಹಾಗೂ 22ರಂದು ನಡೆಯಲಿರುವ ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆ ಫಲಿತಾಂಶದ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.
ವಿಧಾನ ಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪರೀಕ್ಷೆಯ ಫಲಿತಾಂಶವನ್ನು ಆಗಸ್ಟ್ 10 ರಂದು ಪ್ರಕಟಿಸುವ ಸಾಧ್ಯತೆಗಳಿವೆ ಎಂದು ಹೇಳಿದ್ದಾರೆ.
ಮೊದಲ ಪತ್ರಿಕೆ ಪರೀಕ್ಷೆ ಪೂರ್ಣ ಯಶಸ್ವಿಯಾಗಿದ್ದು,
ಶೇ. 99.6 ರಷ್ಟು ಮಕ್ಕಳು ಪರೀಕ್ಷೆಗೆ ಹಾಜರಾಗಿದ್ದರು. ಜು.22ರಂದು ನಡೆಯಲಿರುವ ಭಾಷಾ ವಿಷಯಗಳ ಪರೀಕ್ಷೆಗೆ ಎಲ್ಲ ಸಿದ್ಧತೆಗಳಾಗಿವೆ ಎಂದು ಇದೇ ವೇಳೆ ಅವರು ತಿಳಿಸಿದರು.
ಹಾಗೆಯೇ ಇಂದು ಸಂಜೆ 4:30 ಕ್ಕೆ ಪದವಿಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ ನಲ್ಲಿ ದ್ವಿತೀಯ ಪಿಯು ಫಲಿತಾಂಶ ಪ್ರಕಟಗೊಳ್ಳಲಿದೆ. ಈ ಕೆಳಗಿನ ವೆಬ್ ಸೈಟ್ ಗಳಲ್ಲಿ ಫಲಿತಾಂಶ ದೊರೆಯಲಿದೆ.
kseeb.kar.nic.in
karresults.nic.in
pue.kar.nic.in
ವಿದ್ಯಾರ್ಥಿಗಳು ಫಲಿತಾಂಶ ನೋಡಲು ನೋಂದಣಿ
ಸಂಖ್ಯೆ ಕಡ್ಡಾಯವಾಗಿ ಪಡೆದುಕೊಳ್ಳಬೇಕು. ಇಲಾಖೆ ವೆಬ್ ಸೈಟ್ ನಲ್ಲಿ ‘Know my registration number’ ಎಂಬ ಲಿಂಕ್ ಮೂಲಕ ಪ್ರತಿ ವಿದ್ಯಾರ್ಥಿಗಳು ನೋಂದಣಿ ಸಂಖ್ಯೆ ಪಡೆಯಬಹುದಾಗಿದೆ ಎಂದು ಹೇಳಿದರು.