ಮುಖ್ಯಮಂತ್ರಿ ಯಡಿಯೂರಪ್ಪ ಜುಲೈ ಮಾಸಾಂತ್ಯ ರಾಜಿನಾಮೆ ? | ಅಭಿಮಾನಿಗಳಿಗೆ ಬಿಎಸ್‌ವೈ ಟ್ಟೀಟ್ ಮೂಲಕ ಹೇಳಿದ್ದೇನು..

ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಗಮನಕ್ಕೆ ದಿನಗಣನೆ ಶುರುವಾಗಿದಂತಿದೆ.

ಜುಲೈ ಅಂತ್ಯದ ವೇಳೆಗೆ ಸಿಎಂ ಯಡಿಯೂರಪ್ಪ ಸರ್ಕಾರಕ್ಕೆ 2 ವರ್ಷ ತುಂಬಿದ ಹೊತ್ತಲ್ಲಿ ಪದತ್ಯಾಗ ಮಾಡಲಿದ್ದಾರೆಂದು ಹೇಳಲಾಗುತ್ತಿದೆ.

ಪುತ್ರ ವಿಜಯೇಂದ್ರ ಜೊತೆ ದೆಹಲಿಗೆ ತೆರಳಿದ್ದ ಯಡಿಯೂರಪ್ಪ ಅವರು, ಪ್ರಧಾನಿ ಮೋದಿ ಅವರನ್ನು ಭೇಟಿಯಾದ ಸಂದರ್ಭದಲ್ಲಿ ನಗುಮೊಗದಲ್ಲಿರುವುದು ಕಂಡು ಬಂದಿತ್ತು.

ಬಳಿಕ ಮಾತನಾಡಿದ್ದ ಯಡಿಯೂರಪ್ಪ ಅವರು, ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಸ್ತುತ ಮುಂದುವರೆಯುವಂತೆ ಹೈಕಮಾಂಡ್ ಸೂಚನೆ ನೀಡಿದೆ ಹೇಳಿದ್ದರು.

ಇದೇ ಜುಲೈ 26 ಕ್ಕೆ ಬಿ.ಎಸ್. ಯಡಿಯೂರಪ್ಪ ಅವರು, ಕರ್ನಾಟಕದ ಮುಖ್ಯಮಂತ್ರಿಯಾಗಿ ಎರಡು ವರ್ಷಗಳ ಅವಧಿ ಪೂರೈಸಲಿದ್ದಾರೆ. 2 ವರ್ಷ ಪೂರ್ಣಗೊಳಿಸಿದ ಬಳಿಕ ಅನಾರೋಗ್ಯ ಕಾರಣ ನೀಡಿ ರಾಜೀನಾಮೆ ನೀಡುವಂತೆ ಯಡಿಯೂರಪ್ಪ ಅವರಿಗೆ ಹೈಕಮಾಂಡ್ ಸೂಚನೆ ನೀಡಿದೆ ಎಂದು ಹೇಳಲಾಗುತ್ತಿದೆ. ಈ ಮಧ್ಯೆ ಹಲೋ ಮಠದ ಸ್ವಾಮೀಜಿಗಳು ಮತ್ತು ಪಕ್ಷಾತೀತವಾಗಿ ಹಲವು ನಾಯಕರುಗಳು ಯಡಿಯೂರಪ್ಪನವರನ್ನು ಮುಖ್ಯಮಂತ್ರಿಯನ್ನಾಗಿ ಮುಂದುವರಿಸಬೇಕೆಂದು ಸಾರ್ವಜನಿಕವಾಗಿ ಕೂಗು ಹಾಕಿದ್ದರು. ಒಂದು ಸಂದರ್ಭದಲ್ಲಿ, ಇವತ್ತು ಮಧ್ಯಾಹ್ನದವರೆಗೆ ಮುಖ್ಯಮಂತ್ರಿಯವರು ಮತ್ತೆ ಮುಂದುವರಿಯುವ ಸಂಭವವಿದೆ ಎನ್ನಲಾಗುತ್ತಿತ್ತು. ಆದರೆ ಇದೀಗ ಮಾನಸಿಕವಾಗಿ ಮುಖ್ಯಮಂತ್ರಿಯವರು ಪದವಿಯಿಂದ ಇಳಿದು ಬರಲು ಸಿದ್ಧವಾದಂತಿದೆ. ಇದಕ್ಕೆ ಪುಷ್ಟಿ ನೀಡುವಂತೆ ಯಡಿಯೂರಪ್ಪ ಟ್ವಿಟ್ಟರ್ ‌ನಲ್ಲಿ ಈ ರೀತಿ ಹೇಳಿದ್ದು, ರಾಜಕೀಯ ಬೆಳವಣಿಗೆಗಳನ್ನಾಧರಿಸಿ ನನ್ನ ಪರವಾಗಿ ಹೇಳಿಕೆ, ಪ್ರತಿಭಟನೆಗಳಿಗೆ ಯಾರೂ ಮುಂದಾಗಬಾರದೆಂದು ವಿನಂತಿಸುತ್ತೇನೆ.

ಅಭಿಮಾನ ಶಿಸ್ತಿನ ವ್ಯಾಪ್ತಿ ಮೀರಬಾರದು.
ಪಕ್ಷ ನನಗೆ ಮಾತೃ ಸಮಾನ,ಅದರ ಗೌರವಕ್ಕೆ ಚ್ಯುತಿ ತರುವ ಘಟನೆಗಳು ನನಗೆ ಅತೀವ ನೋವು ತರುತ್ತದೆ. ನಿಜವಾದ ಹಿತೈಷಿಗಳು ಈ ನಿಟ್ಟಿನಲ್ಲಿ ನನ್ನ ಭಾವನೆಗೆ ಸ್ಪಂದಿಸುತ್ತಾರೆಂದು ನಂಬಿರುವೆ ಎಂದಿದ್ದಾರೆ.

Leave A Reply

Your email address will not be published.