ನಳಿನ್ ಕುಮಾರ್ ಕಟೀಲ್ ಸಹಿತ ಹಲವು ಗಣ್ಯರು ಪ್ರಯಾಣಿಸುತ್ತಿದ್ದ ವಿಮಾನ ಲ್ಯಾಂಡಿಂಗ್ ನಲ್ಲಿ ಸಮಸ್ಯೆ | ಭಯ ಆತಂಕದಿಂದ ಕಣ್ಣೀರು ಹಾಕಿದ ಪ್ರಯಾಣಿಕರು !

Share the Article

ನವದೆಹಲಿ: ಪ್ರತಿಕೂಲ ಹವಾಮಾನ ಹಿನ್ನೆಲೆಯಲ್ಲಿ ಮಂಗಳವಾರ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಶಾಸಕ ಬೆಳ್ಳಿ ಪ್ರಕಾಶ್ ಸೇರಿದಂತೆ ಹಲವು ಶಾಸಕರಿದ್ದ ಇಂಡಿಗೋ ವಿಮಾನ ಲ್ಯಾಂಡಿಂಗ್ ವೇಳೆ ಸಮಸ್ಯೆಯಾಗಿದೆ.

ಮಂಗಳವಾರ ದೆಹಲಿಯಲ್ಲಿ ಪ್ರತಿಕೂಲ ಹವಾಮಾನ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಹೊರಟಿದ್ದ ವಿಮಾನ ಲ್ಯಾಂಡಿಂಗ್ ವೇಳೆ ಸಮಸ್ಯೆಯಾಗಿದೆ.

ರನ್ ವೇ ನಲ್ಲಿ ನೀರು ತುಂಬಿಕೊಂಡಿದ್ದರಿಂದ ವಿಮಾನ ಲ್ಯಾಂಡಿಂಗ್ ವೇಳೆ ಗೊಂದಲವಾಗಿದೆ. 25 ನಿಮಿಷದ ಹಾರಾಟದ ನಂತರ ವಿಮಾನ ಲ್ಯಾಂಡಿಂಗ್ ಆಗಿದೆ. ಈ ವೇಳೆ ವಿಮಾನದಲ್ಲಿದ್ದ ಪ್ರಯಾಣಿಕರು ಭಯ ಮತ್ತು ಆತಂಕದಿಂದ ಕಣ್ಣೀರು ಹಾಕಿದ್ದಾರೆ ಎಂದು ತಿಳಿದುಬಂದಿದೆ.

ವಿಮಾನದಲ್ಲಿ ನಳಿನ್ ಕುಮಾರ್ ಕಟೀಲ್, ಉಪ ಸಭಾಪತಿ ಪ್ರಾಣೇಶ್, ಶಾಸಕರಾದ ಬೆಳ್ಳಿ ಪ್ರಕಾಶ್, ಜೀವರಾಜ್ ಸೇರಿದಂತೆ ಹಲವರಿದ್ದರು ಎಂದು ಮೂಲಗಳು ತಿಳಿಸಿವೆ.

Leave A Reply

Your email address will not be published.