ದಕ್ಷಿಣಕನ್ನಡ, ಉಡುಪಿ, ಉತ್ತರಕನ್ನಡದಲ್ಲಿ ಭಯಂಕರ ಮಳೆಯಾಗಲಿದೆಯಂತೆ ಮಾರ್ರೆ | ನಾಳೆಗೆ ರೆಡ್ ಅಲರ್ಟ್ ಘೋಷಣೆ, ಹಲವೆಡೆ ಆರೆಂಜ್ ಅಲರ್ಟ್

ರಾಜ್ಯದಲ್ಲಿ ವಿವಿಧೆಡೆ ಆರ್ಭಟಿಸುತ್ತಿರುವ ಮಳೆ ಮುಂದಿನ 5 ದಿನಗಳ ಕಾಲ ಮುಂದುವರಿಯಲಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಜು.23ರಂದು ಅತಿ ಹೆಚ್ಚು ಮಳೆಯಾಗಲಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.

ಅಲ್ಲದೆ, ಈ ಭಾಗಗಳಲ್ಲಿ ಜು.24ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ, ಉತ್ತರ ಒಳನಾಡಿನ ಬೆಳಗಾವಿ ಮತ್ತು ಧಾರವಾಡದಲ್ಲಿ ಮುಂದಿನ 24 ಗಂಟೆ ಆರೆಂಜ್ ಅಲರ್ಟ್ ಇದೆ. ಬೀದರ್, ಗದಗ, ಹಾವೇರಿ, ಕಲಬುರಗಿ, ಯಾದಗಿರಿಯಲ್ಲಿ ಮುಂದಿನ 48 ಗಂಟೆ ಯೆಲ್ಲೋ ಅಲರ್ಟ್ ಇರಲಿದೆ. ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಜಿಟಿಜಿಟಿ ಮಳೆಯಾಗುವ ಸಾಧ್ಯತೆಯಿದೆ.

ಜು.2ನೇ ವಾರದಿಂದ ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಹೆಚ್ಚಳವಾಗುತ್ತಿದೆ. ನದಿಗಳು ಉಕ್ಕಿ ಹರಿಯುತ್ತಿವೆ. ನೆರೆಯ ಕೇರಳ, ಮಹಾರಾಷ್ಟ್ರ ಸೇರಿ ಇನ್ನಿತರ ರಾಜ್ಯಗಳಲ್ಲಿ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಗಡಿ ಭಾಗಗಳ ಡ್ಯಾಂಗಳಿಗೆ ಹಾಗೂ ನದಿಗಳಿಗೆ ಅಪಾರ ಪ್ರಮಾಣ ನೀರು ಹರಿದು ಬರುತ್ತಿದೆ. ಸಮುದ್ರ, ಜಲಾಶಯ ಹಾಗೂ ನದಿ ತೀರದ ಭಾಗಗಳಲ್ಲಿ ವಾಸಿಸುತ್ತಿರುವ ನಿವಾಸಿಗಳು ಎಚ್ಚ ಗ್ರೂಪ್ ವಹಿಸಬೇಕೆಂದು ಇಲಾಖೆ ಮನವಿ ಮಾಡಿದೆ.

Leave A Reply

Your email address will not be published.